ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

Public TV
3 Min Read

ಬೆಳಗಾವಿ: ಜಿಲ್ಲೆಯ ಬೆಳಗಾವಿ (Belgavi) ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) (ಲಂಪಿ ಸ್ಕಿನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷ್ಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ (ಸೊಳ್ಳೆ, ನೊಣ, ಉಣ್ಣೆ) ಇತ್ಯಾದಿಗಳಿಂದ ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ (Rainy Season) ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ. ಹೀಗಾಗಿ ಜನರು ಎಚ್ಚರಿಕೆ ವಹಿಸಬೇಕು.

ಚರ್ಮಗಂಟು ರೋಗದ ಲಕ್ಷಣಗಳು
ಅತಿಯಾದ ಜ್ವರ (105-180ಈ) ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು. ಜಾನುವಾರುಗಳ ಚರ್ಮದ ಮೇಲೆ 2-5 ಸೆಂ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು. ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ, ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ, ರೋಗ ಹರಡುತ್ತದೆ. ಸೊಳ್ಳೆ, ಉಣ್ಣೆ, ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ ಕಲುಷಿತಗೊಂಡ ನೀರು (Contaminated water) ಹಾಗೂ ಆಹಾರದಿಂದ ಜಾನುವಾರುಗಳ ನೇರ ಸಂಪರ್ಕದಿಂದ ರೋಗ ಹರಡುವಿಕೆ ಪ್ರಮಾಣ 10-20% ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5% ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್‌ಗೆ 5 ಸಾವಿರಕ್ಕೂ ಅಧಿಕ ಹಸುಗಳ ಮಾರಣ ಹೋಮ – ಹೆದರಿ ವಲಸೆ ಹಾದಿ ಹಿಡಿದ ಜನ

ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ
ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ. ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು. ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು. ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು. ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು. ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 5-6 ಬಾರಿ ಕುಡಿಸಬೇಕು. ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಇದನ್ನೂ ಓದಿ: ಹಸುಗಳನ್ನು ರಕ್ಷಿಸಿ – ಲಂಪಿ ವೈರಸ್ ಬಗ್ಗೆ ಕಳವಳ ವ್ಯಕ್ತಪಡಿಸಿದ ಶಿಖರ್ ಧವನ್

ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(1%)ಫಿನೈಲ್(2%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (2%) ದಿನಕ್ಕೆ 2 ಬಾರಿ ಸಿಂಪಡಿಸಬೇಕು. ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ (Animal Husbandry Departmentz) ಜಿಲ್ಲಾ ಉಪ ನಿರ್ದೇಶಕ ಡಾ.ರಾಜೀವ ಎನ್, ಕೂಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *