ಮೈಕ್ರೋ ಫೈನಾನ್ಸ್ ಹೆಸರಲ್ಲಿ ಕಿರುಕುಳ ಕೊಡುವವರಿಗೆ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣ ಹೆಚ್ಚಳ – ಪರಮೇಶ್ವರ್

Public TV
1 Min Read

ಬೆಂಗಳೂರು: ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಈ ಮೊದಲು ಬಿಲ್‌ನಲ್ಲಿ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ರೂ. ಮಾಡಿದ್ದೇವೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು. ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲೋದಿಲ್ಲ. ಇದಕ್ಕಾಗಿ ದಂಡ ಮತ್ತು ಶಿಕ್ಷೆ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಮಾತ್ರ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಆಗಿದೆ ಕೂಡಲೇ ಸುಗ್ರಿವಾಜ್ಞೆ ಜಾರಿ ಆಗಲಿದೆ ಎಂದರು.

ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್‌ಗೆ ಹೋಗಬಹುದು ಎಂದುಕೊಂಡು ಬಿಲ್ ಸಿದ್ದ ಮಾಡುವುದು ತಡವಾಗಿದೆ. ಮೊದಲ ಕರಡು ಸಿದ್ಧ ಮಾಡಿದಾಗ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಚರ್ಚಿಸಿದ್ದೆವು. ಹೀಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಕಾನೂನು ಇಲಾಖೆಗೆ ಸೂಚನೆ ಕೊಟ್ಟಿದ್ದರು. ಇದಕ್ಕೆ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕೋರ್ಟ್ಗೆ ಹೋದರೂ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಅಂದುಕೊಂಡಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

 

Share This Article