ಅಪಘಾತಗಳ ಸಂಖ್ಯೆ ಹೆಚ್ಚಳ – ದಶಪಥ ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

Public TV
1 Min Read

– ಸಿಬ್ಬಂದಿಗೆ ಖಡಕ್ ಸೂಚನೆ

ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Exprpessway) ಅಪಘಾತಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಮಂಗಳವಾರ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಹೆದ್ದಾರಿ ಪರಿಶೀಲನೆ ನಡೆಸಿದರು.

ಎನ್‌ಹೆಚ್ ಅಧಿಕಾರಿಗಳು ಹಾಗೂ ಡಿಬಿಎಲ್ ಸಂಸ್ಥೆಯ ಎಂಜಿನಿಯರ್ ಜೊತೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ ಅಲೋಕ್ ಕುಮಾರ್ ಇದೇ ವೇಳೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು. ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ ಸಿಬ್ಬಂದಿ ಕಂಡರೆ ವಾಹನ ಸವಾರರಿಗೆ ಒಂದು ಭಯ ಇರುತ್ತದೆ. ಬೆಂಗಳೂರಿನಿಂದ ಬೆಳಗಾವಿಯವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದು ತಿಳಿಹೇಳಿದರು.

ಹಿಂದೆ ದಾವಣಗೆರೆಯಲ್ಲಿ ನಾನು ಎಸ್‌ಪಿ ಆಗಿದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಯೇ, 40% ರಷ್ಟು ಅಪಘಾತ ತಗ್ಗಿಸಿದ್ದೆವು. ಎಲ್ಲಾ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ, ಅಶ್ವಥ್ ನಾರಾಯಣ್ ಮುಖಾಮುಖಿ; ಪರಸ್ಪರ ಟಾಂಗ್

ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು. ಈ ವೇಳೆ ಎಡಿಜಿಪಿಗೆ, ಐಜಿಪಿ ಡಾ.ಬಿಆರ್ ರವಿಕಾಂತೇಗೌಡ, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್ ಹಾಗೂ ಸ್ಥಳೀಯ ಪೊಲೀಸರು ಸಾಥ್ ನೀಡಿದ್ರು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ