ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಬೊಮ್ಮಾಯಿ ಟೀಕೆ

By
2 Min Read

ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Government) ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ, 6ನೇ ಗ್ಯಾರಂಟಿ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೋ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ದಲಿತರಿಗೆ ದ್ರೋಹ:
ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಹಾದಿಯೇ ಅಯೋಮಯವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಬಾರಿಗೆ ಪರಿಸರ ಸ್ನೇಹಿ ಬೋಯಿಂಗ್‌ ಹೊಂದಿರುವ 20ನೇ ವಿಮಾನ ಪರಿಚಯಿಸಿದ ಆಕಾಶ ಏರ್‌ಲೈನ್‌

ಎಸ್‌ಸಿಪಿ ಟಿಎಸ್‌ಪಿ ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ.ಗಳನ್ನ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ-ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ. ರಾಜ್ಯ ಸರ್ಕಾರ ಎಸ್‌ಸಿಪಿ ಟಿಎಸ್‌ಪಿ ಯೋಜನೆಗೆ 34 ಸಾವಿರ ಕೋಟಿ ಕೊಡುವ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು ಎಸ್‌ಸಿಪಿ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ.‌ಹೆಚ್.‌ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್ಸಿಪಿ ಟಿಎಸ್ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ-ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ-ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್‌ಗೆ ಇರುವ ನಿರ್ಲಕ್ಷ್ಯ ಧೋರೆಣೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾದ ಪೊಲೀಸರು ತನಿಖೆಗೆ ಅಸಮರ್ಥರು- ಸುಪ್ರೀಂ ಆಕ್ರೋಶ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್