ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

Public TV
1 Min Read

ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.ಇದನ್ನೂ ಓದಿ: ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

ಎರಡು ದಿನಗಳ ಹಿಂದೆಯಷ್ಟೇ ನದಿಯ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ.

ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಡೆಯಾಗಿವೆ. ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

Share This Article