ಭಾರತದ ಕನಸು ಭಗ್ನ – ಇಂಗ್ಲೆಂಡ್‌ಗೆ 7 ವಿಕೆಟ್‌ಗಳ ಜಯ

Public TV
3 Min Read

ಬರ್ಮಿಂಗ್‌ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ಅವರ ಶತಕಗಳ ನೆರವಿನಿಂದ ಭಾರತದ ವಿರುದ್ಧದ 5ನೇ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಜಯಗಳಿಸಿದೆ. ಈ ಮೂಲಕ ಟೆಸ್ಟ್ ಸರಣಿ 2-2ರಲ್ಲಿ ಸಮಬಲ ಸಾಧಿಸಿದೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ನೀಡಿದ್ದ 378 ರನ್‌ಗಳ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡವು 2ನೇ ಇನ್ನಿಂಗ್ಸ್‌ನ 76.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 378 ರನ್‌ಗಳಿಸುವ ಮೂಲಕ ಜಯ ಸಾಧಿಸಿತು. ಇದರಿಂದ ಅಂತಿಮ ಟೆಸ್ಟ್ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಟೀಂ ಇಂಡಿಯಾ ಕನಸು ಭಗ್ನಗೊಂಡಿತು. ಇದನ್ನೂ ಓದಿ: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಕೋವಿಡ್‌ನಿಂದ ಗುಣಮುಖ – T20ಗೆ ಲಭ್ಯ

ಇಂಗ್ಲೆಂಡ್ ತಂಡವು 2ನೇ ಇನ್ನಿಂಗ್ಸ್‌ನ 4ನೇ ದಿನದ ಆಟದಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 259 ರನ್ ಪೇರಿಸಿತ್ತು. ಜಾನಿ ಬೈರ್‌ಸ್ಟೋವ್ ಹಾಗೂ ಜೋ ರೂಟ್ ತಮ್ಮ ಆಕರ್ಷಕ ಬ್ಯಾಟಿಂಗ್‌ನಿಂದ ಕ್ರಮವಾಗಿ 114 ಹಾಗೂ 142 ರನ್‌ಗಳನ್ನು ಗಳಿಸಿದ್ದರು. ಇದನ್ನೂ ಓದಿ: ಸುಮ್ನೆ ಬ್ಯಾಟಿಂಗ್ ಮಾಡ್ ಗುರು – ಬೈರ್‌ಸ್ಟೋವ್ ಜೊತೆ ವಾಗ್ವಾದಕ್ಕಿಳಿದ ಕೊಹ್ಲಿ

5ನೇ ದಿನದ ಆಟಕ್ಕೆ ಗೆಲ್ಲಲು 119 ರನ್‌ಗಳು ಮಾತ್ರವೇ ಬೇಕಿತ್ತು. ಆದರೆ ಟೀಂ ಇಂಡಿಯಾವು ರೂಟ್ ಹಾಗೂ ಬೈರ್‌ಸ್ಟೋವ್ ಅವರ ಜೋಡಿಯು ಭಾರತದ ಸರಣಿ ಗೆಲ್ಲುವ ಆಸೆಗೆ ತಣ್ಣೀರು ಎರಚಿತು.

ಮೊದಲ 4 ಪಂದ್ಯಗಳಲ್ಲಿ ಟೀಂ ಇಂಡಿಯಾ 2 ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಸಾಧಿಸಿತ್ತು. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನ್ಯಾಟಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 151 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು. ಹೆಡಿಂಗ್ಲೆಯಲ್ಲಿ ನಡೆದ 3ನೇ ಪಂದ್ಯದಲ್ಲಿ ಅಬ್ಬರಿಸಿದ್ದ ಇಂಗ್ಲೆಂಡ್ ತಂಡವು 76 ರನ್ ಹಾಗೂ 7 ವಿಕೆಟ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು.

ಓವಲ್ ಮೈದಾನದಲ್ಲಿ ನಡೆದ 4ನೇ ಪಂದ್ಯದಲ್ಲಿ ಭಾರತವು 157 ರನ್‌ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸರಣಿ ಕೈವಶ ಮಾಡಿಕೊಳ್ಳುವ ಕನಸುಕಂಡಿತ್ತು. ಆದರೆ ಅಂತಿಮ ಟೆಸ್ಟ್‌ನಲ್ಲಿ ರೂಟ್ ಹಾಗೂ ಬೈರ್‌ಸ್ಟೋವ್ ಜೋಡಿಯ ಬಿರುಸಿನ ಆಟವು ಇಂಡಿಯಾದ ಸರಣಿ ಗೆಲ್ಲುವ ಕನಸನ್ನು ನುಚ್ಚುನೂರು ಮಾಡಿದೆ.

ರೂಟ್, ಬೈರ್‌ಸ್ಟೋವ್ ಶತಕಗಳ ಅಬ್ಬರ: ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ 4ನೇ ವಿಕೆಟ್ ಆಟಕ್ಕೆ ಜೊತೆಯಾದ ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ 315 ಎಸೆತಗಳಲ್ಲಿ 268 ರನ್‌ಗಳ ಜೊತೆಯಾಟವಾಡಿದರು. ಇಬ್ಬರ ಆಕರ್ಷಕ ಶತಕಗಳ ನೆರವಿನಿಂದ ತವರಿನಲ್ಲಿ ಮುಖಭಂಗ ಆಗುವುದನ್ನು ತಪ್ಪಿಸಿಕೊಂಡಿತು. ಜೋ ರೂಟ್ 173 ಎಸೆತಗಳಲ್ಲಿ 142 ರನ್ (19 ಫೋರ್, 1 ಸಿಕ್ಸರ್) ಗಳಿಸಿದರೆ 145 ಎಸೆತಗಳನ್ನು ಎದುರಿಸಿದ ಬೈರ್‌ಸ್ಟೋವ್ 114 ರನ್ (15 ಫೋರ್ ಹಾಗೂ 1 ಸಿಕ್ಸರ್) ಗಳಿಸುವ ಮೂಲಕ ತವರಿನಲ್ಲಿ ಗೆದ್ದು ಬೀಗಿದರು.

ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಬೆನ್‌ಸ್ಟೋಕ್ಸ್ 4, ಬ್ರಾಡ್ ಮತ್ತು ಪೋಟ್ಸ್ ತಲಾ 2 ವಿಕೆಟ್ ಹಾಗೂ ಲೀಚ್, ಆಂಡ್ರ‍್ಯೂಸನ್ ತಲಾ 1 ವಿಕೆಟ್ ಪಡೆದಿದ್ದರು. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್?

ಆತಿಥೇಯ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 245 ರನ್ ಗಳಿಗೆ ಆಲೌಟ್ ಆಗಿ ಇಂಗ್ಲೆಂಡ್‌ಗೆ ಗೆಲ್ಲಲು 378 ರನ್‌ಗಳ ಗುರಿ ನೀಡಿತ್ತು. 2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 245 ರನ್ ಗಳಿಗೆ ಸರ್ವಪತನ ಕಂಡಿತ್ತು. ಟೀಂ ಇಂಡಿಯಾ ಪರ ಚೇತೇಶ್ವರ ಪೂಜಾರ 66, ವಿರಾಟ್ ಕೊಹ್ಲಿ 20, ರಿಷಬ್ ಪಂತ್ 57, ಶ್ರೇಯಸ್ ಅಯ್ಯರ್ 19, ರವೀಂದ್ರ ಜಡೇಜಾ 23 ರನ್ ಗಳಿಸಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *