IND vs ENG: 2ನೇ ಟೆಸ್ಟ್​ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಕೆಎಲ್ ರಾಹುಲ್!

Public TV
1 Min Read

ವಿಶಾಖಪಟ್ಟಣದಲ್ಲಿ ನಡೆಯಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರನ್ನು ಹೊರಗಿಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೋಮವಾರ ಘೋಷಿಸಿದೆ.

ರವೀಂದ್ರ ಜಡೇಜಾ (Ravindra Jadeja) ಹಾಗೂ ಕೆಎಲ್ ರಾಹುಲ್ (KL Rahul)ಹೊರಬಿದ್ದಿದ್ದರಿಂದ ಟೀಂ ಇಂಡಿಯಾಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಈ ಹಿಂದೆ ಹೈದರಾಬಾದ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 28 ರನ್​ಗಳಿಂದ ಸೋತು ಟೀಂ ಇಂಡಿಯಾ ತೀವ್ರ ಮುಜುಗರಕ್ಕೆ ಒಳಗಾಗಿತ್ತು.

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಬ್ಯಾಟಿಂಗ್‌ ಮಾಡುವಾಗ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ರಾಹುಲ್‌ ಅವರು ಬಲ ಕ್ವಾಡ್ರಿಸೆಪ್ಸ್‌ ನೋವಿನಿಂದ ಬಳಲುತ್ತಿದ್ದಾರೆ. ಸದ್ಯ ಈ ಇಬ್ಬರು ಹೊರಗುಳಿದ ನಂತರ ಸರ್ಫರಾಜ್‌ ಖಾನ್‌, ಸೌರಭ್‌ ಕುಮಾರ್‌ ಮತ್ತು ವಾಷಿಂಗ್ಟನ್‌ ಸುಂದರ್‌ ಅವರನ್ನು ಆಯ್ಕೆ ಸಮಿತಿಯು ಎರಡನೇ ಟೆಸ್ಟ್‌ ತಂಡಕ್ಕೆ ಸೇರಿಸಿದೆ. ಇದನ್ನೂ ಓದಿ: ಹನುಮಂತನ ಕೆಣಕಿದ್ದಕ್ಕೆ ಲಂಕ ದಹನವಾಯ್ತು, ಅದೇ ರೀತಿ ನಿಮ್ಮ ಅವನತಿಯಾಗುತ್ತೆ: ಹೆಚ್‍ಡಿಕೆ ವಾಗ್ದಾಳಿ

ಟೀಂ ಇಂಡಿಯಾ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್‌ ಕೀಪರ್‌ ), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

Share This Article