ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕಪ್ಪುಪಟ್ಟಿ ಧರಿಸಿದ ಟೀಂ ಇಂಡಿಯಾ ಆಟಗಾರರು – ಕಾರಣವೇನು ಗೊತ್ತಾ?

Public TV
2 Min Read

ಲಕ್ನೋ: ವಿಶ್ವಕಪ್ 2023ರ (World Cup 2023) ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಆಟಗಾರರು ಕಪ್ಪುಪಟ್ಟಿ ಧರಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ಬಗ್ಗೆ ಕಾರಣವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಭಾರತೀಯ ಕ್ರಿಕೆಟ್ ದಂತಕಥೆ ಬಿಷನ್ ಸಿಂಗ್ ಬೇಡಿ (Bishan Singh Bedi) ಅವರ ನಿಧನಕ್ಕೆ ಸಂತಾಪ ಸೂಚಿಸುವ ಸಲುವಾಗಿ ಟೀಂ ಇಂಡಿಯಾ ಆಟಗಾರರು ಕಪ್ಪುಪಟ್ಟಿ ಧರಿಸಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸೋಲಿನ ಹತಾಶೆಯ ನಡುವೆ ಪಾಕ್‍ಗೆ ದಂಡದ ಬರೆ

ವಯೋಸಹಜ ಅನಾರೋಗ್ಯದಿಂದ ಬೇಡಿ ಅ.23 ರಂದು ದೆಹಲಿಯಲ್ಲಿ ನಿಧನರಾಗಿದ್ದರು. ಅವರು ಭಾರತಕ್ಕಾಗಿ 1967 ಮತ್ತು 1979ರ ನಡುವೆ 67 ಟೆಸ್ಟ್‍ಗಳನ್ನು ಆಡಿದ್ದರು. ಅವುಗಳಲ್ಲಿ 22ರಲ್ಲಿ ನಾಯಕತ್ವ ವಹಿಸಿದ್ದರು. ಅದರಲ್ಲಿ ಒಟ್ಟು 266 ವಿಕೆಟ್‍ಗಳನ್ನು ಗಳಿಸಿದ್ದರು. ತಮ್ಮ 12 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 10 ಏಕದಿನ ಅಂತರರಾಷ್ಟ್ರೀಯ ಪಂದ್ಯವಾಡಿ 7 ವಿಕೆಟ್‍ಗಳನ್ನು ಪಡೆದಿದ್ದಾರೆ.

ಅಮೃತಸರದಲ್ಲಿ 1946ರ ಸೆಪ್ಟೆಂಬರ್ 25 ರಂದು ಜನಿಸಿದ ಬೇಡಿ ಭಾರತದ ಮೊದಲ ಏಕದಿನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 370 ಪ್ರಥಮ ದರ್ಜೆ ಪಂದ್ಯಗಳಲ್ಲಿ 1,560 ವಿಕೆಟ್ ಪಡೆದಿದ್ದಾರೆ. ದೇಶೀಯ ಲೀಗ್‍ನಲ್ಲಿ ದೆಹಲಿ ಪರ ಸಿಂಗ್ ಆಡಿದ್ದರು.

ಗಾಯಗೊಂಡಿದ್ದ ಅಜಿತ್ ವಾಡೇಕರ್ ಅನುಪಸ್ಥಿತಿಯಲ್ಲಿ ಅವರು ತಂಡದ ನಾಯಕತ್ವ ವಹಿಸಿದ್ದಾಗ ಇಂಗ್ಲೆಂಡ್ ವಿರುದ್ಧದ 1971 ರ ಭಾರತ ಐತಿಹಾಸಿಕ ಸರಣಿಯಲ್ಲಿ ಜಯ ದಾಖಲಿಸಿತ್ತು.

ಆಸ್ಟ್ರೇಲಿಯಾ ಆಟಗಾರ ಫವಾದ್ ಅಹ್ಮದ್ ಇತ್ತೀಚೆಗೆ ತಮ್ಮ ನಾಲ್ಕು ತಿಂಗಳ ಮಗುವನ್ನು ಕಳೆದುಕೊಂಡಿದ್ದಾಗ ಆಸ್ಟ್ರೇಲಿಯನ್ ಆಟಗಾರರು ಕಪ್ಪುಪಟ್ಟಿ ಧರಿಸಿ ಫವಾದ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದರು. ಇದನ್ನೂ ಓದಿ: ಕೊಹ್ಲಿ ಶತಕ ಕಣ್ತುಂಬಿಕೊಳ್ಳಲು 12,445 ಕಿಮೀನಿಂದ ಬಂದಿದ್ದ ಅಭಿಮಾನಿಗೆ ಭಾರೀ ನಿರಾಸೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್