ಹುಬ್ಬಳ್ಳಿ: 79ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿಂದು (Idgah Maidan) ಧ್ವಜಾರೋಹಣ ನೆರವೇರಿಸಲಾಯಿತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi Dharwad Municipal Corporation) ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಂದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಉಪಸ್ಥಿತರಿದ್ದ ಶಾಸಕ ಮಹೇಶ ಟೆಂಗಿನಕಾಯಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗ್ಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ
ಇದಾದ ಬಳಿಕ ಸಂಗೊಳ್ಳಿ ರಾಯಣ್ಣ ಜನ್ಮದಿನದ ಹಿನ್ನೆಲೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಹೇಶ್ ಟೆಂಗಿನಕಾಯಿ ಗೌರವ ಅರ್ಪಿಪಿಸಿದರು. ಈ ಸಂರ್ಭದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಶಾಸಕರಿಗೆ ಸಾಥ್ ನೀಡಿದರು. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ಮಹಾನಗರ ಪಾಲಿಕೆಯ ಮೇಯರ್ ಸೇರಿದಂತೆ ಸರ್ವ ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇದನ್ನೂ ಓದಿ: ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್ ಗಿಫ್ಟ್ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್ ಯೋಜನೆ