ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

By
2 Min Read

ಒಟ್ಟಾವಾ: ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್‌ ಟ್ರುಡೋ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ. ಕೆನಡಿಯನ್ನರು (Canadians) ಮತ್ತು ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.

ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಯಾವುದೇ ಕಾರಣಕ್ಕೆ ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ನಯವಾಗಿ ಹೇಳುತ್ತಲೇ ಈ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ. ಇನ್ನು ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ಕೊಟ್ಟಿದೆ.

ಇತ್ತೀಚೆಗಷ್ಟೇ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಖಲಿಸ್ತಾನಿಗಳ ಅಟ್ಟಹಾಸನ್ನೆ ಬ್ರೇಕ್‌ ಹಾಕುವ ಬಗ್ಗೆ ಕೆನಡಾ ಪ್ರಧಾನಿಯವರೊಂದಿಗೆ ನೇರ ಮಾತುಕತೆ ನಡೆದಿತ್ತು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್