ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

Public TV
1 Min Read

ನವದೆಹಲಿ: ಭೂ, ಜಲ, ವಾಯು ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಿ ಭಾರತ ಮತ್ತು ಪಾಕಿಸ್ತಾನ (India Pakistan) ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

ಜಗತ್ತನ್ನು ಆತಂಕಕ್ಕೀಡು ಮಾಡಿದ ನಾಲ್ಕು ದಿನಗಳ ಉದ್ವಿಗ್ನತೆ ನಂತರ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ (Ceasefire) ಒಪ್ಪಿಕೊಂಡಿವೆ. ಇಂದು ಸಂಜೆ 5 ಗಂಟೆಯಿಂದಲೇ ಎಲ್ಲಾ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್‌ ಖಾತೆಯಲ್ಲಿ, ಭಾರತ ಮತ್ತು ಪಾಕ್‌ ನಡುವಿನ ಸಂಧಾನದ ಬಗ್ಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಭಾರತವು ಕದನ ವಿರಾಮವನ್ನು ದೃಢಪಡಿಸಿತು.

ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸಂಜೆ 5 ಗಂಟೆಯಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ- ಪಾಕ್ ನಡುವೆ ಕದನ ವಿರಾಮ

ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12 ಗಂಟೆಗೆ ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ಮಿಶ್ರಿ ಮಾಹಿತಿ ನೀಡಿದ್ದಾರೆ.

Share This Article