24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

Public TV
2 Min Read

– ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ ಎಂದ ಯುಎಸ್‌ ಅಧ್ಯಕ್ಷ

ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೊಮ್ಮೆ ಭಾರತದ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಕಳೆದ 2 ದಿನಗಳಲ್ಲಿ 2ನೇ ಬಾರಿಗೆ ಟ್ರಂಪ್‌ ನೀಡಿದ ಬೆದರಿಕೆಯಾಗಿದೆ.

ಭಾರತ ಉತ್ತಮ ಪಾಲುದಾರನಲ್ಲ
ಹೌದು. ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು (Tariff Threat) ಗಣನೀಯವಾಗಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ಮೂಲಕ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಭಾರತ ಫಂಡಿಂಗ್‌ – ಅಮೆರಿಕ

ಭಾರತ ಲಾಭ ಮಾಡಿಕೊಳ್ಳುತ್ತಿದೆ
ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್‌ ಮಾತನಾಡಿದ್ದರು, ಭಾರತ ರಷ್ಯಾದಿಂದ (India-Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ವೀಸಾ ಅವಧಿ ಮೀರಿ ವಾಸ್ತವ್ಯ; ಭಾರತ ಸೇರಿ ವಿದೇಶಿ ಪ್ರಜೆಗಳಿಗೆ ಅಮೆರಿಕ ಗಡೀಪಾರು ಎಚ್ಚರಿಕೆ

ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ. ಇದನ್ನೂ ಓದಿ:  ಟ್ರಂಪ್ ಸುಂಕ ಬೆದರಿಕೆ ನಡ್ವೆ ಅಮೆರಿಕಕ್ಕೆ ತಿವಿದ ಇಂಡಿಯನ್ ಆರ್ಮಿ – ಪಾಕ್‌ಗೆ ಶಸ್ತ್ರಾಸ್ತ್ರ ಪೂರೈಕೆ ಬಗ್ಗೆ 1971ರ ಪೇಪರ್ ಕಟಿಂಗ್‌ ಪೋಸ್ಟ್

2ನೇ ಅತೀ ದೊಡ್ಡ ಖರೀದಿದಾರ
ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.

Share This Article