ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

Public TV
1 Min Read

ನವದೆಹಲಿ: ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ (S-400 Air Defence Systems) ಯಶಸ್ವಿ ಕಾರ್ಯಕ್ಷಮತೆಯ ನಂತರ ಭಾರತವು ರಷ್ಯಾದಿಂದ (India – Russia) ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯ ಎರಡು ಸ್ಕ್ವಾಡ್ರನ್‌ಗಳನ್ನು ಹೆಚ್ಚುವರಿಯಾಗಿ ಖರೀದಿಸಲು ಆಸಕ್ತಿ ತೋರಿದೆ ಎಂದು ವರದಿಗಳು ತಿಳಿಸಿವೆ.

ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆ ವೇಳೆ ಪಾಕಿಸ್ತಾನ ವಾಯುಪಡೆಯ ಬಹು ಯುದ್ಧ ವಿಮಾನಗಳು ಹಾಗೂ ಡ್ರೋನ್‌ಗಳನ್ನು ಹೊಡೆದುರುಳಿಸುವ ಮೂಲಕ ದಾಳಿಯನ್ನು ವಿಫಲಗೊಳಿಸುವಲ್ಲಿ S-400 (ಸುದರ್ಶನ ಚಕ್ರ) ವ್ಯವಸ್ಥೆಗಳು ಪ್ರಮುಖ ಪಾತ್ರ ವಹಿಸಿದ್ದವು. ಹೀಗಾಗಿ ಇನ್ನಷ್ಟು S-400 ವಾಯುರಕ್ಷಣಾ ವ್ಯವಸ್ಥೆ ಖರೀದಿಸಲು ಮುಂದಾಗಿದೆ. ಇದರೊಂದಿಗೆ ಮುಂದುವರಿದ S-500 ವ್ಯವಸ್ಥೆಯನ್ನೂ ಖರೀದಿಸಲು ಆಸಕ್ತಿ ತೋರಿಸಿದೆ. ಇದು S-400 ಗಿಂತ ಹೆಚ್ಚಿನ ವ್ಯಾಪ್ತಿ ಮತ್ತು ಸಾಮರ್ಥ್ಯ ಹೊಂದಿದೆ. ಇದಕ್ಕೆ ಇನ್ನೂ ರಷ್ಯಾದಿಂದ ಅನುಮೋದನೆ ದೊರೆತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ನೌಕಾದಳದಿಂದ ಮಿಸೈಲ್ ದಾಳಿಗೆ ಟಾರ್ಗೆಟ್ ಫಿಕ್ಸ್ ಆಗಿತ್ತು – ಆದ್ರೆ ಅಂತಿಮ ಆದೇಶ ಬರಲಿಲ್ಲ

ಭಾರತವು 2018 ರಲ್ಲಿ ರಷ್ಯಾ ಜೊತೆ ಐದು S-400 ರೆಜಿಮೆಂಟ್‌ಗಳ ಖರೀದಿಗಾಗಿ 5.43 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಇಲ್ಲಿಯವರೆಗೆ, ಮೂರು ರೆಜಿಮೆಂಟ್‌ಗಳನ್ನು ತಲುಪಿಸಲಾಗಿದೆ ಮತ್ತು ನಿರ್ಣಾಯಕ ಕಾರ್ಯತಂತ್ರದ ರಂಗಗಳಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

ಭಾರತೀಯ ರಕ್ಷಣಾ ಪಡೆಗಳಿಂದ ʻಸುದರ್ಶನ ಚಕ್ರʼ ಎಂದು ಮರುನಾಮಕರಣಗೊಂಡ S-400 ವ್ಯವಸ್ಥೆಯು 380 ಕಿಲೋಮೀಟರ್‌ಗಳ ವ್ಯಾಪ್ತಿಯಲ್ಲಿ ಕಾರ್ಯತಂತ್ರದ ಬಾಂಬರ್‌ಗಳು, ಫೈಟರ್ ಜೆಟ್‌ಗಳು, ಕಣ್ಗಾವಲು ವಿಮಾನಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳಂತಹ ಪ್ರತಿಕೂಲ ಗುರಿಗಳನ್ನು ಪತ್ತೆಹಚ್ಚುವ ಮತ್ತು ತಟಸ್ಥಗೊಳಿಸುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

Share This Article