ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ಗೆ ಟೀಂ ಇಂಡಿಯಾ ಪ್ರಕಟ- ಗಿಲ್‌ಗೆ ನಾಯಕ ಪಟ್ಟ

By
2 Min Read

ಮುಂಬೈ: ಜೂನ್ 20 ರಿಂದ ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ (BCCI) ಟೀಂ ಇಂಡಿಯಾ (Team India) ತಂಡವನ್ನು ಪ್ರಕಟಿಸಿದ್ದು, ಶುಭಮನ್‌ ಗಿಲ್‌ (Shubman Gill )ತಂಡವನ್ನು ಮುನ್ನಡೆಸಲಿದ್ದಾರೆ.

ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ 18 ಆಟಗಾರರನ್ನೊಳಗೊಂಡ ತಂಡವನ್ನು ಅಜಿತ್ ಅಗರ್‌ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಶುಭ್‌ಮನ್ ಗಿಲ್‌ಗೆ ನಾಯಕ ಸ್ಥಾನ ನೀಡಿದರೆ ವಿಕೆಟ್‌ ಕೀಪರ್ ಬ್ಯಾಟರ್ ರಿಷಭ್ ಪಂತ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡಕ್ಕೆ ಗುಡ್‌ಬೈ ಹೇಳಿದ ನಂತರ ನಾಯಕ ಯಾರಾಗುತ್ತಾರೆ ಎಂಬ ಕುತೂಹಲ ಹೆಚ್ಚಿತ್ತು. ಬುಮ್ರಾ, ಕೆ ಎಲ್ ರಾಹುಲ್, ರಿಷಭ್ ಪಂತ್‌, ಶುಭಮನ್‌ ಗಿಲ್‌ ಮಧ್ಯೆ ರೇಸ್‌ ಇತ್ತು. ಅಂತಿಮವಾಗಿ ಗಿಲ್‌ ಅವರಿಗೆ ಬಿಸಿಸಿಐ ಪಟ್ಟವನ್ನು ಕಟ್ಟಿದೆ.

8 ವರ್ಷದ ಬಳಿಕ ಕರುಣ್‌ ನಾಯರ್‌ ಟೀಂ ಇಂಡಿಯಾಗೆ ಮರಳಿದ್ದಾರೆ. ಸಾಯಿ ಸುದರ್ಶನ್ ಹಾಗೂ ಅರ್ಶದೀಪ್ ಸಿಂಗ್ ಇದೇ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಫಿಟ್ನೆಸ್ ಕಾರಣದಿಂದಾಗಿ ಮೊಹಮ್ಮದ್ ಶಮಿ ತಂಡದಿಂದ ಹೊರಬಿದ್ದಿದ್ದು, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ
ಮೊದಲ ಟೆಸ್ಟ್: 20-24 ಜೂನ್, 2025 – ಹೆಡ್ಲಿಂಗ್ಲೆ, ಲೀಡ್ಸ್
2ನೇ ಟೆಸ್ಟ್: ಜುಲೈ 2-6, 2025 – ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್
3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್
4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್

ಭಾರತ ತಂಡ:
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್,ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್.

Share This Article