Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

Public TV
2 Min Read

ಅಹಮದಾಬಾದ್‌: ಇಲ್ಲಿನ ಮೇಘನಿ ನಗರದಲ್ಲಿ ಪತನವಾದ ಏರ್‌ ಇಂಡಿಯಾ (Air India) ಬೋಯಿಂಗ್-787 ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಅನ್ನು ಡೇಟಾ ರಿಕವರಿಗಾಗಿ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವಿಮಾನದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR)ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾದ ಹಿನ್ನೆಲೆ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

ಜೂನ್‌ 13ರಂದು ಬಿಜೆ ಮೆಡಿಕಲ್‌ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್‌ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ (Black Box) ಅನ್ನು‌ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ವಶಪಡಿಸಿಕೊಂಡಿತ್ತು. ಆದ್ರೆ ಬ್ಲ್ಯಾಕ್‌‌ ಬಾಕ್ಸ್‌ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಕ್ಸ್‌ ಅನ್ನು ಅಮೆರಿಕಾಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

2ನೇ ಬ್ಲ್ಯಾಕ್‌ ಬಾಕ್ಸ್‌ ಪರಿಶೀಲನೆ
ಏರ್‌ ಇಂಡಿಯಾ ಬೋಯಿಂಗ್-787 ವಿಮಾನದ 2ನೇ ಬ್ಲ್ಯಾಕ್‌ ಬಾಕ್ಸ್‌ (ಡಿಜಿಟಲ್‌ ಫ್ಲೈಟ್‌ ಡೇಟಾ ರೆಕಾರ್ಡರ್) ಕಳೆದ ಭಾನುವಾರ ಪತ್ತೆಯಾಗಿತ್ತು. ಇದು ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಆಗಿದ್ದು, ವಿಮಾನದಲ್ಲಿ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದರು. ಸದ್ಯ 2ನೇ ಬ್ಲ್ಯಾಕ್‌ಬಾಕ್ಸ್‌ ಅನ್ನು ಭಾರತದಲ್ಲೇ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

ಏನಿದು ಬ್ಲ್ಯಾಕ್‌ ಬಾಕ್ಸ್‌?
ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ‘ಫ್ಲೈಟ್ ಡಾಟಾ ರೆಕಾರ್ಡರ್’ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್‌ ಬಾಕ್ಸ್‌ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.

ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

Share This Article