ಸೂರ್ಯನ ಆರ್ಭಟಕ್ಕೆ ವಿಂಡೀಸ್‌ ಕಂಗಾಲು, ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ – ಸರಣಿ ಜಯದ ಕನಸು ಜೀವಂತ

Public TV
2 Min Read

ಜಾರ್ಜ್‌ಟೌನ್ (ಗಯಾನಾ): ಸೂರ್ಯಕುಮಾರ್‌ ಯಾದವ್‌ (Suryakumar Yadav), ತಿಲಕ್‌ ವರ್ಮಾ ಭರ್ಜರಿ ಬ್ಯಾಟಿಂಗ್‌ ಹಾಗೂ ಕುಲ್‌ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್‌ ಇಂಡೀಸ್‌ (West Indies) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 1-2 ಅಂತರದಲ್ಲಿ ಕಾಯ್ದುಕೊಂಡಿದ್ದು ಸರಣಿ ಜಯದ ಕನಸು ಜೀವಂತವಾಗಿಸಿಕೊಂಡಿದೆ.

ವಿಂಡೀಸ್‌ ನೀಡಿದ 159 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 17.5 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 164 ರನ್‌ ಚಚ್ಚಿ ಗೆಲುವು ಸಾಧಿಸಿತು. ಸ್ಫೋಟಕ ಆರಂಭ ಪಡೆದ ಟೀಂ ಇಂಡಿಯಾ ಪವರ್‌ ಪ್ಲೇನಲ್ಲೇ ಭರ್ಜರಿ ಬ್ಯಾಟಿಂಗ್‌ನೊಂದಿಗೆ 6 ಓವರ್‌ಗಳಲ್ಲಿ 60 ರನ್‌ ಬಾರಿಸಿತ್ತು. ಆರಂಭಿಕರಾದ ಯಶಸ್ವಿ ಜೈಸ್ವಾಲ್‌ ಹಾಗೂ ಶುಭಮನ್‌ ಗಿಲ್‌ ಕಳಪೆ ಪ್ರದರ್ಶನ ನೀಡಿ ಕೈಚೆಲ್ಲಿದರೂ, 3ನೇ ವಿಕೆಟ್‌ಗೆ ಜೊತೆಯಾದ ಸೂರ್ಯಕುಮಾರ್‌ ಯಾದವ್‌ ಹಾಗೂ ತಿಲಕ್‌ ವರ್ಮಾ (Tilak Varma) ಜೋಡಿ ವಿಂಡೀಸ್‌ ಬೌಲರ್‌ಗಳನ್ನ ಹಿಗ್ಗಾಮುಗ್ಗ ಚೆಂಡಾಡಿತು. 51 ಎಸೆತಗಳಲ್ಲಿ ಈ ಜೋಡಿ 87 ರನ್‌ ಬಾರಿಸಿತ್ತು.

188.63 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಯಾದವ್‌ ಸೂರ್ಯಕುಮಾರ್‌ ಯಾದವ್‌ 44 ಎಸೆತಗಳಲ್ಲಿ 83 ರನ್‌ (4 ಸಿಕ್ಸರ್‌, 10 ಬೌಂಡರಿ) ಚಚ್ಚಿ ಔಟಾದರು. ನಂತರ ತಿಲಕ್‌ ವರ್ಮಾ 49 ರನ್‌ (37 ಎಸೆತ, 1 ಸಿಕ್ಸರ್‌, 4 ಬೌಂಡರಿ) ಬಾರಿಸಿದರೆ, ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 15 ಎಸೆತಗಳಲ್ಲಿ 20 ರನ್‌ ಬಾರಿಸಿ ಅಜೇಯರಾಗುಳಿದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 7.4 ಓವರ್‌ಗಳಲ್ಲಿ 55 ರನ್‌ ಕಲೆ ಹಾಕಿತು. ಬ್ರೆಂಡನ್‌ ಕಿಂಗ್‌ 42 ರನ್‌ ಗಳಿಸಿದ್ರೆ, ಕೇಲ್‌ ಮೇಯರ್ಸ್‌ 25 ರನ್‌ ಗಳಿಸಿ ಔಟಾದರು. ಈ ಬೆನ್ನಲ್ಲೇ ಜಾನ್ಸನ್ ಜಾರ್ಲ್ಸ್ 12 ರನ್‌ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ಇದನ್ನೂ ಓದಿ: ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

ಇನ್ನೂ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ನಿಕೋಲಸ್‌ ಪೂರನ್‌ ಭರ್ಜರಿ ಬ್ಯಾಟಿಂಗ್‌ ನಡೆಸುತ್ತಿದ್ದರು. 12 ಎಸೆತಗಳಲ್ಲಿ 20 ರನ್‌ ಗಳಿಸಿದ್ದಾಗ ಕುಲ್‌ದೀಪ್‌ ಬೌಲಿಂಗ್‌ಗೆ ಸಿಕ್ಸರ್‌ ಬಾರಿಸಲು ಮುಂದಾಗಿ ಸ್ಟಂಪ್‌ಔಟ್‌ ಆದರು. ಭರವಸೆಯ ಆಟಗಾರ ಶಿಮ್ರಾನ್‌ ಹೆಟ್ಮೇಯರ್‌ 9 ರನ್‌ ಗಳಿಸಿ ಕೈಚೆಲ್ಲಿದರೆ ನಾಯಕ ರೋವ್ಮನ್‌ ಪೋವೆಲ್‌ 19 ಎಸೆತಗಳಲ್ಲಿ 40 ರನ್‌ (3 ಸಿಕ್ಸರ್‌, 1 ಬೌಂಡರಿ) ಸಿಡಿಸಿ ಅಜೇಯರಾಗುಳಿದರು.

ಇನ್ನೂ 4 ಓವರ್‌ಗಳಲ್ಲಿ 28 ರನ್‌ ನೀಡಿದ ಕುಲ್‌ದೀಪ್‌ ಯಾದವ್‌ ಪ್ರಮುಖ 3 ವಿಕೆಟ್‌ ಪಡೆದರೆ ಮುಕೇಶ್‌ ಕುಮಾರ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಪಾಕಿಸ್ತಾನ ತಂಡದಲ್ಲಿ ಎಲ್ಲರೂ ಉತ್ತಮ ಬೌಲರ್‌ಗಳೇ – ರೋಹಿತ್‌ ಶರ್ಮಾ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್