ಓಮಿಕ್ರಾನ್ ನಡುವೆಯೂ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ

Public TV
1 Min Read

ಮುಂಬೈ: ಭಾರತ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ಭಾಗವಾಗಿದ್ದ ನಾಲ್ಕು ಟಿ20 ಪಂದ್ಯಗಳನ್ನು ನಂತರ ಆಡಲಾಗುತ್ತದೆ ಎಂದು ಕಾರ್ಯದರ್ಶಿ ಜಯ್ ಶಾ ಶನಿವಾರ ಪ್ರಕಟಿಸಿದ್ದಾರೆ.

ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಲು ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಜ್ಜಾಗಿದೆ. ಆದರೆ ದೇಶದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ ಆತಂಕದಿಂದಾಗಿ ಮಂಡಳಿಯು ಟಿ20 ಸರಣಿಯನ್ನು ಮುಂದೂಡಲು ನಿರ್ಧರಿಸಿದೆ. ಈ ಹಿಂದೆ  ಕೊರೊನಾ ರೂಪಾಂತರಿ ಓಮಿಕ್ರಾನ್ ಭೀತಿಯಿಂದಾಗಿ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಒಂದು ವಾರ ಹಿಂದಕ್ಕೆ ತಳ್ಳಬಹುದು ಎಂದು  ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆ ನಡೆಸಿ, ಎರಡು ಮಂಡಳಿಗಳು ನಿರಂತರ ಸಂಪರ್ಕದಲ್ಲಿವೆ ಮತ್ತು ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ಇದ್ದರೂ ಬಯೋಬಬಲ್ ವ್ಯವಸ್ಥೆ ಬಿಸಿಸಿಐಗೆ ಸಮಾಧಾನ ತಂದಿದೆ ಎನ್ನಲಾಗಿದೆ. ಹೀಗಾಗಿ ಟೀ ಇಂಡಿಯಾ ತಂಡವನ್ನು ಕಳುಹಿಸಲು ನಿರ್ಧರಿಸಿದೆ. ಇದನ್ನೂ ಓದಿ: ಕೆಬಿಸಿ ನಿರೂಪಣೆ ಒಪ್ಪಿಕೊಳ್ಳಲು ನಿಜವಾದ ಕಾರಣ ಬಿಚ್ಚಿಟ್ಟ ಬಿಗ್ ಬಿ

ತವರಿನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಪಂದ್ಯದ ಬಳಿಕ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಗಳ ಪಂದ್ಯ ನಿಗದಿಯಾಗಿದೆ. ಪ್ರವಾಸದಲ್ಲಿ ಭಾರತ ತಂಡ 3 ಟೆಸ್ಟ್, 3 ಏಕದಿನ ಹಾಗೂ 4 ಟಿ20 ಸರಣಿಗಳ ವೇಳಾಪಟ್ಟಿ ಈಗಾಗಲೇ ನಿಗದಿಯಾಗಿತ್ತು. ಆದರೆ 4 ಟಿ20 ಪಂದ್ಯಗಳನ್ನು ಮುಂದೂಡಿದ್ದಾರೆ. ಡಿ.17ರಿಂದ ಜೊಹಾನ್ಸ್ ಬರ್ಗ್‍ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. ಇಂದು ನ್ಯೂಜಿಲೆಂಡ್ ಮತ್ತು ಇಂಡಿಯಾದ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಇದನ್ನೂ ಓದಿ: ಭಾರತೀಯ ಮೂಲದ ಗಣಿತಜ್ಞನಿಗೆ ಸಿಪ್ರಿಯನ್ ಫೊಯಾಸ್ ಪ್ರಶಸ್ತಿ

Share This Article
Leave a Comment

Leave a Reply

Your email address will not be published. Required fields are marked *