ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಸ್ಥಾನವಿಲ್ಲ: ಮೋದಿ

Public TV
1 Min Read

ನವದೆಹಲಿ: ಸ್ವಾತಂತ್ರ್ಯದ 100 ನೇ ವರ್ಷಾಚರಣೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಅದರಲ್ಲಿ ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಭ್ರಷ್ಟಾಚಾರ, ಜಾತಿಯತೆ ಮತ್ತು ಕೋಮುವಾದಕ್ಕೆ ನಮ್ಮ ರಾಷ್ಟ್ರೀಯ ಜೀವನದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಆರೋಗ್ಯದಲ್ಲಿ ಏರುಪೇರು – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಕುರಿತು ಮಾತನಾಡಿದ ಪ್ರಧಾನಿ, ಮಾರ್ಗದರ್ಶನಕ್ಕಾಗಿ ಜಗತ್ತು ಈಗ ಭಾರತದತ್ತ ನೋಡುತ್ತಿದೆ. ನಮ್ಮ ಮಾತುಗಳು ಮತ್ತು ದೃಷ್ಟಿಯನ್ನು ಜಗತ್ತು ಭವಿಷ್ಯದ ಮಾರ್ಗಸೂಚಿಯಾಗಿ ನೋಡುತ್ತದೆ. ಇದು ಕೇವಲ ಕಲ್ಪನೆಗಳಲ್ಲ. ವಿಶ್ವದ ಜಿಡಿಪಿ-ಕೇಂದ್ರಿತ ದೃಷ್ಟಿಕೋನವು ಮಾನವ-ಕೇಂದ್ರಿತ ದೃಷ್ಟಿಕೋನವಾಗಿ ಬದಲಾಗುತ್ತಿದೆ. ಈ ಪರಿವರ್ತನೆಯಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಬಗೆಗಿನ ಪ್ರಪಂಚದ ಗ್ರಹಿಕೆ ಹೇಗೆ ಬದಲಾಗುತ್ತಿದೆ ಎಂಬುದನ್ನು ಒತ್ತಿ ಹೇಳಿದ ಮೋದಿ, ದೀರ್ಘಕಾಲದಿಂದ ಭಾರತವನ್ನು ಒಂದು ಶತಕೋಟಿ ಹಸಿದ ಹೊಟ್ಟೆಗಳ ದೇಶವನ್ನಾಗಿ ನೋಡಲಾಗುತ್ತಿತ್ತು. ಈಗ ಅದು ಒಂದು ಶತಕೋಟಿ ಮಹತ್ವಾಕಾಂಕ್ಷೆಯ ಮನಸ್ಸುಗಳು ಮತ್ತು ಎರಡು ಶತಕೋಟಿ ಕೌಶಲ್ಯಪೂರ್ಣ ಕೈಗಳ ದೇಶವಾಗಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

ಭಾರತದ ಜನಸಂಖ್ಯೆಯು ಮುಂದಿನ ಕೆಲವು ದಶಕಗಳಲ್ಲಿ ಬೃಹತ್ ಜನಸಂಖ್ಯಾ ಲಾಭಾಂಶವನ್ನು ಪಡೆಯಲು ಸಾಧ್ಯವಾಗಿಸುತ್ತದೆ. ಮುಂದಿನ 1,000 ವರ್ಷಗಳ ಕಾಲ ನೆನಪಿನಲ್ಲಿ ಉಳಿಯುವ ಬೆಳವಣಿಗೆಗೆ ಅಡಿಪಾಯ ಹಾಕಲು ಇಂದು ಭಾರತೀಯರಿಗೆ ಉತ್ತಮ ಅವಕಾಶವಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್