ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 15.5 ಓವರ್‌ಗಳಲ್ಲೇ 3 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿ ಗೆಲುವು ಸಾಧಿಸಿತು.
ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ 35 ರನ್, ಶುಭಮನ್ ಗಿಲ್ 28 ರನ್, ತಿಲಕ್ ವರ್ಮಾ ಅಜೇಯ 26 ರನ್, ಸೂರ್ಯಕುಮಾರ್ ಯಾದವ್ 12 ರನ್, ಶಿವಂ ದುಬೆ ಅಜೇಯ 10 ರನ್ ಗಳಿಸಿದರು.
ಇನ್ನೂ ಬೌಲಿಂಗ್‌ನಲ್ಲಿ ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಕಿತ್ತರೆ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ ತಲಾ ಒಂದೊಂದು ವಿಕೆಟ್ ಪಡೆದರು.
ತತ್ತರಿಸಿದ ಬ್ಯಾಟರ್ಸ್
ಇನ್ನೂ ದಕ್ಷಿಣ ಆಫ್ರಿಕಾ ಪರ ನಾಯಕ ಏಡನ್ ಮಾರ್ಕ್ರಂ 61 ರನ್, ಡೊನೊವಾ ಫೆರೇರಾ 20 ರನ್, ಅನ್ರಿಚ್ ನಾರ್ಟ್ಜೆ 12 ರನ್ ಗಳಿಸಿದ್ದು ಬಿಟ್ರೆ, ಉಳಿದೆಲ್ಲರೂ ಒಂದಂಕಿ ಮೊತ್ತಕ್ಕೆ ಔಟಾದರು. ಬೌಲಿಂಗ್‌ನಲ್ಲಿ ಆಫ್ರಿಕಾ ಪರ ಲುಂಗಿ ಎನ್‌ಗಿಡಿ, ಮಾರ್ಕೋ ಜಾನ್ಸೆನ್, ಕಾರ್ಬಿನ್ ಬಾಷ್ ತಲಾ ಒಂದೊಂದು ವಿಕೆಟ್ ಪಡೆದರು.


