ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

Public TV
1 Min Read

ಲಂಡನ್‌: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ (Indian Origin Woman) ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದು ಹೇಳಿದ್ದಾರೆ.

ಬ್ರಿಟನ್‌ನ ವೆಸ್ಟ್‌ ಮಿಡ್‌ಲ್ಯಾಂಡ್ಸ್‌ನಲ್ಲಿ (West Midlands) ಘಟನೆ ನಡೆದಿದ್ದು, ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಿದ್ದಾರೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ ಬಂಧಿಸಲಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಧಗಂಟೆ ಅಂತರದಲ್ಲಿ 2 ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ

ಅಲ್ಲದೇ ಈಗಾಗಲೇ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಲಾಗಿದ್ದು, ಆರೋಪಿಯ ಫೋಟೋವನ್ನೂ ರಿಲೀಸ್‌ ಮಾಡಲಾಗಿದೆ. ಆರೋಪಿ ಹುಡುಕಾಟಕ್ಕೆ ತಮ್ಮೊಂದಿಗೆ ಸಹಕರಿಸುವಂತೆ ಸ್ಥಳೀಯ ನಿವಾಸಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಮಹಿಳೆಯೊಬ್ಬರು ದೌರ್ಜನ್ಯಕ್ಕೆ ಒಳಗಾಗಿ ರಸ್ತೆ ಮಧ್ಯೆ ಅಳುತ್ತಾ ಕುಳಿತಿದ್ದಾಳೆ ಅನ್ನೋ ವಿಷಯ ಪೊಲೀಸರಿಗೆ ಗೊತ್ತಾಯ್ತು. ಸುದ್ದಿ ತಿಳಿದ ಪೊಲೀಸರು ವಾಲ್ಸಾಲ್‌ನ ಪಾರ್ಕ್ ಹಾಲ್ ಪ್ರದೇಶಕ್ಕೆ ಹೋದಾಗ ಸಂತ್ರಸ್ತೆಯನ್ನ ಗುರುತಿಸಿದ್ದಾರೆ.  ಇದನ್ನೂ ಓದಿ: ನೆಲಮಂಗಲ | ತಣ್ಣಗಾಗಿದ್ದ ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ

Share This Article