ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

1 Min Read

ಕ್ಯಾಲಿಫೋರ್ನಿಯಾ: ಇಲ್ಲಿನ (California) ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ  (Karnataka) ಮೂಲದ ವಿದ್ಯಾರ್ಥಿ (Student) ಶವವಾಗಿ ಪತ್ತೆಯಾಗಿದ್ದಾರೆ. ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಾಕೇತ್ ಶ್ರೀನಿವಾಸಯ್ಯ (22) ಮೃತ ವಿದ್ಯಾರ್ಥಿ. ಅವರು ಫೆ.9 ರಂದು ನಾಪತ್ತೆಯಾಗಿದ್ದರು.

ಪೊಲೀಸರು ಅವರ ಶವವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ವಿದ್ಯಾರ್ಥಿಯ ಶವವನ್ನು ಭಾರತಕ್ಕೆ ವಾಪಸ್ ಕಳುಹಿಸಲು ಅಗತ್ಯವಿರುವ ಎಲ್ಲಾ ಸಹಾಯ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಅಕಾಲಿಕ ಸಾವಿನಿಂದ ದುಃಖಕ್ಕೊಳಗಾದ ಕುಟುಂಬದ ಜೊತೆ ನಾವು ನಿಲ್ಲುತ್ತೇವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇವೆ ಎಂದು ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

ಸಾಕೇತ್‌ ಕಾಲೇಜು ಕ್ಯಾಂಪಸ್‌ನಿಂದ ಒಂದು ಕಿಲೋಮೀಟರ್ ದೂರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ನಂತರ ಅವರಿಗಾಗಿ ಲೇಕ್ ಅಂಜಾ ಮತ್ತು ಬರ್ಕ್ಲಿ ಹಿಲ್ಸ್ ಪ್ರದೇಶಗಳಲ್ಲಿ ನಗರದಾದ್ಯಂತ ಹುಡುಕಾಡಲಾಗಿತ್ತು.

ಐಐಟಿ ಮದ್ರಾಸ್ ಹಳೆಯ ವಿದ್ಯಾರ್ಥಿಯಾಗಿದ್ದ ಸಾಕೇತ್‌, ಬರ್ಕ್ಲಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಅವರು ಬೆಂಗಳೂರಿನ ಶ್ರೀ ವಾಣಿ ಶಿಕ್ಷಣ ಕೇಂದ್ರದಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಹೈಪರ್‌ಲೂಪ್‌ಗಾಗಿ ಮೈಕ್ರೋಚಾನೆಲ್ ಕೂಲಿಂಗ್ ಸಿಸ್ಟಮ್ ಮತ್ತು ಅದರ ವಿಧಾನ ಕಂಡುಹಿಡಿದ ಆರು ಪೇಟೆಂಟ್ ಹೊಂದಿರುವವರಲ್ಲಿ ಅವರು ಒಬ್ಬರಾಗಿದ್ದರು. ಇದನ್ನೂ ಓದಿ: ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Share This Article