ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

Public TV
1 Min Read

ನವದೆಹಲಿ: ಭಾರತ (India) ಹಾಗೂ ಕೆನಡಾ (Canada) ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿರುವ ಹಿನ್ನೆಲೆ ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ (Visa) ಸೇವೆಯನ್ನು ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜೂನ್‌ನಲ್ಲಿ ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಆರೋಪಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ವೀಸಾ ಸಲಹೆಗಳನ್ನು ಒದಗಿಸುವ ಭಾರತದ ಆನ್‌ಲೈನ್ ವೀಸಾ ಅರ್ಜಿ ಕೇಂದ್ರ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ತನ್ನ ವೆಬ್‌ಸೈಟ್‌ನಲ್ಲಿ ಸೂಚನೆಯನ್ನು ಪೋಸ್ಟ್ ಮಾಡಿದೆ. ಭಾರತೀಯ ಮಿಷನ್‌ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ 2023ರ ಸೆಪ್ಟೆಂಬರ್ 21ರಿಂದ ಜಾರಿಗೆ ಬರುವಂತೆ ಭಾರತೀಯ ವೀಸಾ ಸೇವೆಗಳನ್ನು ಮುಂದಿನ ಸೂಚನೆಯ ತನಕ ಸ್ಥಗಿತಗೊಳಿಸಲಾಗಿದೆ ಎಂದು ಬರೆದಿದೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

ಕೆನಡಾದ ಪ್ರಧಾನಿ ಟ್ರುಡೋ ಸೋಮವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್‌ನ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಭಾರತ ತಳ್ಳಿ ಹಾಕಿದೆ. ನಾವು ತಮ್ಮ ಸಂಸತ್ತಿನಲ್ಲಿ ಕೆನಡಾ ಪ್ರಧಾನಿಯವರ ಹೇಳಿಕೆಯನ್ನು ಗಮನಿಸಿದ್ದೇವೆ ಹಾಗೂ ಅದನ್ನು ತಿರಸ್ಕರಿಸುತ್ತೇವೆ. ಮತ್ತು ಅವರ ವಿದೇಶಾಂಗ ಸಚಿವರ ಹೇಳಿಕೆನ್ನೂ ತಿರಸ್ಕರಿಸುತ್ತೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತ ವಿರೋಧಿ ಪ್ರಚಾರಕ್ಕೆ ಖಲಿಸ್ತಾನ್ ಉಗ್ರರ ಜೊತೆ ಕೈ ಜೋಡಿಸಿದ ಪಾಕ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್