ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಪೌರತ್ವ ಕಾಯ್ದೆಗೆ ಪರ ವಿರೋಧಗಳು ಬರುತ್ತಿದೆ.
ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರದ ವಿರುದ್ಧ ದೇಶದ ಅನೇಕ ಭಾಗಗಳಲ್ಲಿ ಹೋರಾಟಗಳು ನಡೆಯುತ್ತಿದೆ. ರಾಷ್ಟ್ರ ರಾಜಧಾನಿಯಿಂದ ರಾಜ್ಯ ರಾಜಧಾನಿಯವರೆಗೆ ಒಂದಲ್ಲ ಒಂದು ಸಂಘಟನೆಗಳು ಸಿಎಎ ವಿರುದ್ಧ ಪ್ರತಿಭಟನೆಗಳನ್ನು ಮಾಡುತ್ತಿದೆ.
ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಕೇಂದ್ರ ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ.
ಸ್ವೀಡನ್ ದೇಶದ (ಯೂರೋಪ್) ಸ್ಕೋಕ್ ಹೊಂನಲ್ಲಿ ಸಭೆ ಸೇರಿದ ಭಾರತೀಯರು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ಸಿಎಎಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇದು ಉತ್ತಮ ತಿದ್ದುಪಡಿ ಇದರಿಂದ ಅಕ್ರಮ ವಲಸಿಗರು ದೇಶದಿಂದ ಹೊರ ಹೋಗುತ್ತಾರೆ. ಮೋದಿಯ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ಸಿಎಎ ಪರ ಬ್ಯಾನರ್ ಗಳನ್ನು ಹಿಡಿದು ಕೇಂದ್ರ ಸರ್ಕಾರಕ್ಕೆ ಜೈಕಾರ ಹಾಕಿದ್ದಾರೆ.