ಇಸ್ಲಾಮಿಕ್‌ ಪ್ರಾರ್ಥನೆ ಬಳಿಕ ಹಂದಿ ಮಾಂಸ ಸೇವನೆ; ಟಿಕ್‌ಟಾಕ್‌ ಸ್ಟಾರ್‌ಗೆ 2 ವರ್ಷ ಜೈಲು

Public TV
2 Min Read

ಜಕಾರ್ತ: ಇಸ್ಲಾಮಿಕ್‌ ಪ್ರಾರ್ಥನೆ (Islamic Prayer) ಬಳಿಕ ಹಂದಿ ಮಾಂಸ ತಿಂದ ಟಿಕ್‌ ಟಾಕ್‌ ಸ್ಟಾರ್‌ ಲೀನಾ ಮುಖರ್ಜಿಗೆ ಇಂಡೋನೇಷ್ಯಾ ನ್ಯಾಯಾಲಯವು (Indonesia Court) 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

33 ವರ್ಷದ ಮಹಿಳೆಗೆ 2 ವರ್ಷ ಜೈಲು (Jail) ಶಿಕ್ಷೆ ವಿಧಿಸಿದ್ದು, ಇದರೊಂದಿಗೆ 16,245 ಡಾಲರ್‌ (13.47 ಲಕ್ಷ ರೂ.) ದಂಡ ವಿಧಿಸಿದೆ. ನಿಗದಿತ ಅವಧಿಯಲ್ಲಿ ದಂಡ ಪಾವತಿಸದೇ ಇದ್ದರೆ ಇನ್ನೂ 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವುದಾಗಿ ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

ಟಿಕ್‌ಟಾಕ್‌ ಸ್ಟಾರ್‌ ಲೀನಾ ಮುಖರ್ಜಿ (Lina Mukherjee) ಬಾಲಿಗೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬಿಸ್ಮಿಲ್ಲಾ ಪ್ರಾರ್ಥನೆ ಮಾಡಿದ ಬಳಿಕ ಹಂದಿ ಮಾಂಸ ತಿಂದ ವೀಡಿಯೋವನ್ನ ಟಿಕ್‌ಟಾಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಇದಾದ 6 ತಿಂಗಳ ಬಳಿಕ ಆಕೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಬಾಲಿಯಲ್ಲಿ 33 ವರ್ಷದ ಲೀನಾ ಮುಖರ್ಜಿ ಅವರು ಕಳೆದ ಮಾರ್ಚ್‌ನಲ್ಲಿ ಬಿಸ್ಮಿಲ್ಲಾ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ವಿಡಿಯೊ ವೈರಲ್‌ ಆಗುತ್ತಲೇ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ, ಇಸ್ಲಾಂನಲ್ಲಿ ಹಂದಿ ಮಾಂಸವು ನಿಷಿದ್ಧವಾಗಿರುವ ಕಾರಣ ಲೀನಾ ಮುಖರ್ಜಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಧರ್ಮ ನಿಂದನೆಯ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

ಕೋರ್ಟ್‌ ಹೇಳಿದ್ದೇನು?
ಧಾರ್ಮಿಕ ಆಚಾರ-ವಿಚಾರಗಳನ್ನು ನಂಬುವವರು ಹಾಗೂ ಒಂದು ನಿಗದಿತ ಸಮುದಾಯದ ಜನರ ವಿರುದ್ಧ ದ್ವೇಷ ಹರಡಿಸುವ ಉದ್ದೇಶದಿಂದ ಮಾಡಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಲೀನಾ ಮುಖರ್ಜಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಲೆಮ್‌ಬಾಂಗ್‌ ನ್ಯಾಯಾಲಯವು ತಿಳಿಸಿದೆ. ಇದನ್ನೂ ಓದಿ: RSS ಭಾರತದ ಸಂಸ್ಥೆಗಳನ್ನು ವಶಪಡಿಸಿಕೊಳ್ಳಲು INDIA ಬಣ ಬಿಡಲ್ಲ: ರಾಹುಲ್ ಗಾಂಧಿ

ಇಸ್ಲಾಮಿಕ್‌ ರಾಷ್ಟ್ರವಾಗಿರುವ ಇಂಡೋನೇಷ್ಯಾದಲ್ಲಿ ಧರ್ಮನಿಂದನೆಯ ಕಾನೂನುಗಳು ಬಲಿಷ್ಠವಾಗಿವೆ. ಪ್ರವಾದಿ ಮೊಹಮ್ಮದ್‌ ಹೆಸರಿನಲ್ಲಿ ಜನರಿಗೆ ಉಚಿತವಾಗಿ ಮದ್ಯ ಹಂಚುತ್ತಿದ್ದ 6 ಜನರನ್ನು ಇತ್ತೀಚೆಗಷ್ಟೇ ಬಂಧಿಸಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್