ಅಗ್ನಿ ಅವಘಡದಿಂದ ಕುಸಿದ ಮಸೀದಿಯ ಗುಮ್ಮಟ- ವೀಡಿಯೋ ವೈರಲ್

Public TV
1 Min Read

ಜಕಾರ್ತ: ಅಗ್ನಿ ಅವಘಡದಿಂದಾಗಿ ಇಂಡೋನೇಷ್ಯಾದ ಜಕಾರ್ತಾ ಇಸ್ಲಾಮಿಕ್ ಸೆಂಟರ್ ಗ್ರ್ಯಾಂಡ್ ಮಸೀದಿಯ ದೈತ್ಯ ಗುಮ್ಮಟ (ಮಿನಾರ್) (Indonesia Mosque) ಕುಸಿದಿದೆ.

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಗುಮ್ಮಟವು ಕುಸಿದು ಬೀಳುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಮಸೀದಿಯನ್ನು ನವೀಕರಣಗೊಳಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಲಾಯಿತು. ತಕ್ಷಣವೇ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ: ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸಲ್ಲ, ಆದರೆ ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕ

ಗುಮ್ಮಟ ಉರುಳುವ ಮುನ್ನ ಬೆಂಕಿಯ ಕೆನ್ನಾಲಿಗೆ ಹಾಗೂ ದಟ್ಟವಾದ ಹೊಗೆಯನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವರದಿಗಳ ಪ್ರಕಾರ, ಘಟನೆ ನಡೆದ ಸಂದರ್ಭದಲ್ಲಿ ಮಸೀದಿಯಲ್ಲಿ ನವೀಕರಣದ ಕೆಲಸ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಯಾವ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸುಮಾರು 20 ವರ್ಷಗಳ ಹಿಂದೆ ನವೀಕರಣದ ಸಮಯದಲ್ಲಿ ಮಸೀದಿಯ ಗುಮ್ಮಟದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅಕ್ಟೋಬರ್ 2002ರ ಬೆಂಕಿ ನಂದಿಸಲು ಐದು ಗಂಟೆಗಳನ್ನು ತೆಗೆದುಕೊಂಡಿತು ಎಂದು ವರದಿ ಹೇಳಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *