ಹೇಮಾವತಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – 6 ಕ್ರಸ್ಟ್ ಗೇಟ್ ಓಪನ್

Public TV
1 Min Read

ಹಾಸನ: ಜಿಲ್ಲೆಯ (Hassan) ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು (Chikkamagaluru) ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (Rain) ಗೊರೂರಿನಲ್ಲಿರುವ ಹೇಮಾವತಿ (Hemavati Dam) ಜಲಾಶಯಕ್ಕೆ ಬರುವ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.

ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು 32,925 ಕ್ಯೂಸೆಕ್ ಇದೆ. ಇದನ್ನೂ ಓದಿ: ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

ಜಲಾಶಯದ ಇಂದಿನ ನೀರಿನ ಮಟ್ಟ
ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ
ಸದ್ಯ ಜಲಾಶಯದಲ್ಲಿರುವ ನೀರು – 37.006ಟಿಎಂಸಿ
ಜಲಾಶಯದ ಗರಿಷ್ಠ ಮಟ್ಟ – 2922.00 ಅಡಿ
ಇಂದಿನ ನೀರಿನ ಮಟ್ಟ – 2921.90 ಅಡಿ
ಒಳಹರಿವು – 32087 ಕ್ಯೂಸೆಕ್
ಹೊರಹರಿವು – 32,925 ಕ್ಯೂಸೆಕ್

Share This Article