ಕಬಿನಿ ಜಲಾಶಯಕ್ಕೆ 13 ಸಾವಿರ ಕ್ಯುಸೆಕ್ ಒಳಹರಿವು ಹೆಚ್ಚಳ

Public TV
1 Min Read

ಮೈಸೂರು: ಕೇರಳದ ವಯನಾಡಿನಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ 13 ಸಾವಿರ ಕ್ಯುಸೆಕ್ ನೀರು ಹರಿದುಬಂದಿದ್ದು, ಒಳಹರಿವು ಹೆಚ್ಚಾಗಿದೆ.ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

19.52 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಕಬಿನಿ ಜಲಾಶಯದಲ್ಲಿ ಸದ್ಯ 8.72 ಟಿಎಂಸಿ ನೀರಿದೆ. ಕೇರಳದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.

ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯವೆಂದರೆ ಅದು ಈ ಕಬಿನಿ ಜಲಾಶಯ. ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಕಬಿನಿ ಜಲಾಶಯದಿಂದ ನೀರು ಪೂರೈಸಲಾಗುತ್ತದೆ.ಇದನ್ನೂ ಓದಿ: ಹಿಪ್ಪರಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ – ಕೃಷ್ಣ ನದಿಗೆ ಇಳಿಯದಂತೆ ಎಚ್ಚರಿಕೆ

Share This Article