ವಿಜಯಪುರ: ಮಹಾರಾಷ್ಟ್ರದಲ್ಲಿ (Maharashtra) ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.
ಜಿಲ್ಲೆಯ ಆಲಮಟ್ಟಿಯ ಲಾಲ್‌ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. 123.081 ಟಿಎಂಸಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 82.265 ಟಿಎಂಸಿ ನೀರಿದೆ.
ಸದ್ಯ ಜಲಾಶಯದಲ್ಲಿ 1,15,339 ಅಧಿಕ ಒಳಹರಿವು ದಾಖಲಾಗಿದ್ದು, ನಾರಾಯಣಪುರ ಜಲಾಶಯಕ್ಕೆ 70,420 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಜಿಲ್ಲೆಯ ಕೃಷ್ಣಾ ನದಿ ತಟದಲ್ಲಿರುವ ಜನರಿಗೆ ಜಿಲ್ಲಾಡಳಿತ ಹೈಲರ್ಟ್ ಘೋಷಿಸಿದೆ. ಜನರನ್ನು ನದಿ ಪಾತ್ರಕ್ಕೆ ಹೋಗದಂತೆ ಸೂಚಿಸಿದೆ.