ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

Public TV
1 Min Read

ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.

ಜೈಲಿನಲ್ಲಿದ್ದು ವೀಡಿಯೋ ಕಾಲ್ ಮಾಡಿದ್ದ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಹೈಫೈ ಆತಿಥ್ಯ

Share This Article