ಮೈತ್ರಿ ಸರ್ಕಾರದಲ್ಲಿ ಒಳಜಗಳ- ಬಿಜೆಪಿಯಿಂದ ಮಾಸ್ಟರ್ ಪ್ಲಾನ್

Public TV
1 Min Read

ನವದೆಹಲಿ: ರಾಜ್ಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದ್ದು, ಇದರಿಂದ ರಾಜ್ಯದಲ್ಲಿ ಮತ್ತೆ ಇತಿಹಾಸ ಮರುಕಳಿಸುತ್ತಾ ಎಂಬ ಪ್ರಶ್ನೆಯೊಂದು ಇದೀಗ ಎದ್ದಿದೆ.

ಲೋಕಸಭೆ ಜೊತೆಗೆ ಮಧ್ಯಂತರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಎಲ್ಲದಕ್ಕೂ ಸಿದ್ಧವಾಗುವಂತೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಲೋಕಸಭೆ ಚುನಾವಣೆಯೊಳಗೆ ಒಳ ಜಗಳದಿಂದ ಮೈತ್ರಿ ಸರ್ಕಾರ ಕುಸಿದರೆ ಮತ್ತೆ ಚುನಾವಣೆ ಹೋಗಲು ಚಿಂತನೆ ನಡೆಸಲಾಗಿದೆ. ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಲೋಕಸಭೆಗೆ ಅಖಾಡ ಸಿದ್ಧಪಡಿಸಿಕೊಳ್ಳಲಿರುವ ಬಿಜೆಪಿ ಮೈತ್ರಿ ಸರ್ಕಾರದ ವಿಫಲತೆ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವ ಸಾಧ್ಯತೆಗಳಿವೆ.

2006 ರಲ್ಲಿ ಅನುಕಂಪದ ಆಧಾರದ ಮೇಲೆ ಚುನಾವಣೆ ಎದುರಿಸಿ 110 ಸ್ಥಾನ ಗೆದಿದ್ದ ಬಿಜೆಪಿ, ಮೈತ್ರಿ ಸರ್ಕಾರದ ವಿರೋಧಿ ಅಲೆ ಲೋಕಸಭೆ ಮತ್ತು ವಿಧಾನ ಸಭೆಗೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲಾನ್ ಮಾಡಿದೆ. ಒಟ್ಟಿನಲ್ಲಿ 2006 ರಂತೆ ಇತಿಹಾಸ ರಿಪಿಟ್ ಮಾಡಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *