Chitradurga| ಲಾರಿಗೆ ಇನ್ನೋವಾ ಕಾರು ಡಿಕ್ಕಿ – ಐವರ ದುರ್ಮರಣ

Public TV
1 Min Read

ಚಿತ್ರದುರ್ಗ: ಇನ್ನೋವಾ ಕಾರು (Car) ಲಾರಿಗೆ (Lorry) ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ದಾರುಣ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ (Chitradurga) ಸಿಬಾರ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ-ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೇ, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಬಾರ ಗ್ರಾಮದ ಹೋಟೆಲ್‌ವೊಂದರ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: EXCLUSIVE: ರನ್ಯಾ ಕೇಸ್‌ಗೆ ಟ್ವಿಸ್ಟ್; ನಟಿ ಒಡೆತನದ ಕಂಪನಿಗೆ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರು!

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಭಾರತ VS ನ್ಯೂಜಿಲೆಂಡ್‌ ‘ಫೈನಲ್‌’ ಫೈಟ್‌ – ಟೀಂ ಇಂಡಿಯಾ ಗೆಲುವಿಗೆ ಸ್ಯಾಂಡಲ್‌ವುಡ್‌ ತಾರೆಯರ ವಿಶ್‌

Share This Article