ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

1 Min Read

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ (Arecanut Plantation) ಇನ್ನೋವಾ ಕಾರು(Innova Car) ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು (Belur) ತಾಲೂಕಿನ, ಲಿಂಗಾಪುರ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಮಹಮದ್ (30) ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಬಿದ್ದ ರಭಸಕ್ಕೆ ಮೂರು ಅಡಿಕೆ ಮರಗಳು ಮುರಿದು ಹೋಗಿದ್ದು, ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಅಂದು ರಾಹುಲ್‌, ಇಂದು ಪಂಥ್‌ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಒಣಹಾಕಿದ್ದ ಬಟ್ಟೆ ತರಲು ಹೋದಾಗ ಬಕೆಟ್‌ಗೆ ಬಿದ್ದು ಮಗು ಸಾವು – ಶಾಕ್‌ಗೆ ಒಳಗಾಗಿ ತಾಯಿ ಆತ್ಮಹತ್ಯೆ

Share This Article