ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು: ಬಿ.ಸಿ.ಪಾಟೀಲ್

Public TV
1 Min Read

ಹುಬ್ಬಳ್ಳಿ: ರಾಜ್ಯದಲ್ಲಿ ಅಕಾಲಿಕ ಮಳೆ ಹಿನ್ನೆಲೆ, ಎಲ್ಲ ಕೃಷಿ ಅಧಿಕಾರಗಳು ತಮ್ಮ ಕಾರ್ಯಸ್ಥಾನದಲ್ಲಿರಬೇಕು. ಮಳೆಯಿಂದಾಗಿ ಹಾನಿಗೊಳಗಾದ ಬೆಳೆಯ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು. ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಎಂ ಸಿದ್ದರಾಮಯ್ಯ ಅವರು ತಾವು ಮಾತ್ರ ಸಮರ್ಥರು ಉಳಿದವರೆಲ್ಲರೂ ಅಸಮರ್ಥರು ಎಂದುಕೊಂಡಿದ್ದಾರೆ. ಅವರು ನಮ್ಮನ್ನು ಹೊಗಳಲು ಸಾಧ್ಯವಿಲ್ಲ. ಹೀಗಾಗಿ ಅವರ ಬಗ್ಗೆ ಜಾಸ್ತಿ ತಲೆಕೆಡಿಸಿಕೊಳ್ಳಲ್ಲ. ಮುಂದಿನ ಚುನಾವಣಾ ದೃಷ್ಟಿಯಿಂದ ನಮ್ಮ ಪಕ್ಷದಲ್ಲಿ ಹಲವಾರು ಕಾರ್ಯತಂತ್ರ ನಡೆಯುತ್ತಿದೆ. ಮಿಷನ್ 150 ಉದ್ದೇಶದಿಂದ ಪೂರ್ವಭಾವಿಯಾಗಿ ಪಕ್ಷ ಸಂಘಟನೆ ನಡೆಯುತ್ತಿದೆ ಎಂದರು. ಇದನ್ನೂ ಓದಿ:  ‘ಪುಷ್ಪ’ ಮೂವೀ ಸ್ಟೈಲ್‍ನಲ್ಲಿ ಗಂಡನ ಕುತ್ತಿಗೆ ಕೊಯ್ದ ಪತ್ನಿ

ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ದೊಡ್ಡ ದುರಂತ. ಈಗಾಗಲೇ ಈ ಬಗ್ಗೆ ಸಮಗ್ರವಾಗಿ ತನಿಖೆಯಾಗುತ್ತಿದೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗುತ್ತಿದೆ. ಹುಬ್ಬಳ್ಳಿ ಗಲಭೆ ಪೂರ್ವನಿಯೋಜಿನೆಯಿಂದ ಈಗಾಗಲೇ ಹಲವಾರು ಜನರ ಬಂಧನವಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *