ನೂತನ ಸಂಸತ್ ಭವನದಲ್ಲಿ ಸೆಂಗೋಲ್ ಪ್ರತಿಷ್ಠಾಪನೆ ಶುಭ ಸಂಕೇತ: ಕಾಶೀ ಜಗದ್ಗುರು

Public TV
2 Min Read

ಧಾರವಾಡ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ನಂತರ ಹೊಸ ಸಂಸತ್ ಭವನ (New Parliament) ಉದ್ಘಾಟನೆಯಾಗಿದ್ದು, ಇದು ಇಡೀ ದೇಶವೇ ಹೆಮ್ಮೆ ಪಡುವಂತಹ ವಿಷಯ ಎಂದು ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಹೇಳಿದರು.

ಧಾರವಾಡ (Dharwad) ದಲ್ಲಿ ಮಾತನಾಡಿದ ಅವರು, ಬ್ರಿಟಿಷರು ದೇಶಕ್ಕೆ ಸ್ವಾತಂತ್ರ್ಯ ಕೊಟ್ಟು ಹೋದರು. ಆಗ ಅಧಿಕಾರ ಹಸ್ತಾಂತರ ಮಾಡಿದ್ದರು. ಆ ಸಂದರ್ಭದಲ್ಲಿ ನಂದಿ ಲಾಂಛಿತ ಸುವರ್ಣ ದಂಡ ಕೊಟ್ಟಿದ್ದರಂತೆ. ಅದು ಈಗ ಬೆಳಕಿಗೆ ಬಂದಿದೆ. ಇಲ್ಲಿಯವರೆಗೆ ಅದು ಯಾರಿಗೂ ಗೊತ್ತಿರಲಿಲ್ಲ ಎಂದರು.

ಇದೇ ವೇಳೆ ಧರ್ಮ ಪ್ರತಿಯೊಬ್ಬ ರಾಜನಿಗೂ ಅವಶ್ಯವಾಗಿರಬೇಕು ಎಂದ ಅವರು, ಹಿಂದಿನ ಕಾಲದಲ್ಲಿ ಪ್ರತಿ ರಾಜರಿಗೂ ಧರ್ಮ ಗುರು ಇರುತ್ತಿದ್ದರು. ರಾಜ ಸಿಂಹಾಸನವೇರಿ “ಅಹಂ ಅದಂಡಹ್ಯ” ಎನ್ನುತ್ತಿದ್ದನು. ನನ್ನ ಮೇಲೆ ಯಾವ ದಂಡನೆ ಇರುವುದಿಲ್ಲ ಎನ್ನುತ್ತಿದ್ದರು. ನಾನು ಎಲ್ಲರನ್ನೂ ದಂಡಿಸುವವನು ಎನ್ನುತ್ತಿದ್ದನು ಎಂದು ತಿಳಿಸಿದರು.

ಆಗ ಗುರುಗಳು ಎದ್ದು ನಿಂತು ತಮ್ಮ ಕೈಯಲ್ಲಿರುವ ಧರ್ಮ ದಂಡ ತೋರಿಸುತ್ತಿದ್ದರು. ನಿನ್ನ ಮೇಲೆಯೂ ಧರ್ಮದ ದಂಡ ಇರುತ್ತದೆ ಎಂದು ಹೇಳುತ್ತಿದ್ದರು. ಅದನ್ನು ಮೀರಿ ಧರ್ಮ ಮಾರ್ಗ ಬಿಟ್ಟರೆ ಧರ್ಮ ಶಿಕ್ಷೆ ಕೊಡುತ್ತದೆ ಎನ್ನುತ್ತಿದ್ದರು. ಅಂತಹ ಒಂದು ಧರ್ಮ ದಂಡ (Sengol) ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆ ಆಗಿದೆ ಇದು ಶುಭ ಸಂಕೇತ ಎಂದು ಅವರು ಹೇಳಿದರು. ಇದನ್ನೂ ಓದಿ: ದೇಶವೇ ಮೊದಲು ಎಂಬ ಧ್ಯೇಯದೊಂದಿಗೆ ಮುನ್ನುಗ್ಗಿ: ನರೇಂದ್ರ ಮೋದಿ ಕರೆ

ಕಾಶೀ ಪೀಠ ಮಾತ್ರವಲ್ಲ, ಇಡೀ ವಿಶ್ವವೇ ಹೆಮ್ಮೆ ಪಡುವ ನಾಯಕ ಮೋದಿ (Narendra Modi), ಈಗಾಗಲೇ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದಾರೆ. ಕಾಶೀ ವಿಶ್ವನಾಥ ಮಂದಿರ ಜೀರ್ಣೋದ್ಧಾರ ಆಗಿದೆ ಎಂದ ಅವರು, ಮಹಾಕಾಳೇಶ್ವರ ಮಂದಿರ ಜೀರ್ಣೋದ್ಧಾರ ಆಗಿದೆ. ಅಯೋಧ್ಯೆ ರಾಮಮಂದಿರ ಜೀರ್ಣೋದ್ಧಾರ ಆಗುತ್ತಿದೆ. ಇದೆಲ್ಲವೂ ದೇಶದ ಹಿತದೃಷ್ಟಿಯಿಂದ ಆಗುತ್ತಿವೆ ಎಂದರು.

ನಮ್ಮ ಸಂಸದೀಯ ಕ್ಷೇತ್ರದಿಂದ ಚುನಾಯಿತ ಆದವರು ಪ್ರಧಾನಿ ನರೇಂದ್ರ ಮೋದಿಯವರು, ಮೋದಿಯವರು ನಮ್ಮ ಗುರುಕುಲದ ಶತಾಬ್ದಿ ಕಾರ್ಯಕ್ರಮಕ್ಕೆ ಬಂದಿದ್ದರು. ಆಗ ಸಿದ್ಧಾಂತ ಶಿಖಾಮಣಿ ಬಿಡುಗಡೆ ಮಾಡಿದ್ದರು ಎಂದ ಶ್ರೀಗಳು, ಸನಾತನ ವೀರಶೈವ ಧರ್ಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಶ್ರೀಗಳು ತಿಳಿಸಿದರು.

Share This Article