ದಿವ್ಯಾಂಗ ಮಕ್ಕಳಿಗೆ 5 ಲಕ್ಷ ರೂ.ಗಳ ವಿಶೇಷ ಆರೋಗ್ಯ ವಿಮೆ ಘೋಷಿಸಿದ ಬೊಮ್ಮಾಯಿ

Public TV
2 Min Read

ಬೆಂಗಳೂರು: ವಿಕಲಚೇತನರ ದಿನಾಚರಣೆ (Disabled Persons Day) ಕಾರ್ಯಕ್ರಮದಲ್ಲಿ ದಿವ್ಯಾಂಗ ಮಕ್ಕಳಿಗೆ 5 ಲಕ್ಷ ರೂ.ಗಳ ವಿಶೇಷ ಆರೋಗ್ಯ ವಿಮೆಯನ್ನು (Special Health Insurance) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ.

2022ರ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ನನ್ನೆಲ್ಲ ದೇವರ ಮಕ್ಕಳಿಗೆ ನಮಸ್ಕಾರ. ಸರ್ಕಾರ ನೀಡುವ ಮನೆಗಳಲ್ಲಿ ದಿವ್ಯಾಂಗರಿಗೆ 3% ಮೀಸಲಿಡುತ್ತೇವೆ. ವಿಕಲಚೇತನ ಮಕ್ಕಳಿಗೆ ನೀಡುವ ಟ್ರೈಸೈಕಲ್‍ಗೆ ಹೆಚ್ಚುವರಿಯಾಗಿ 28 ಕೋಟಿ ರೂ. ಬಿಡುಗಡೆ ಮಾಡಿ, 2,000 ಸೈಕಲ್ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ನೆರೆ ರಾಜ್ಯ ಮಹಾರಾಷ್ಟ್ರದ ಪುಣೆ ವ್ಯಕ್ತಿಯಲ್ಲಿ ಝಿಕಾ ವೈರಸ್‌ ಸೋಂಕು ಪತ್ತೆ

ದೇವರು ಸೃಷ್ಟಿಸುವಾಗ ಹಲವಾರು ಸವಾಲುಗಳನ್ನು ಮನುಷ್ಯರಲ್ಲಿ ಹುಟ್ಟಿಹಾಕ್ತಾನೆ. ಎಲ್ಲಾ ಅಂಗಾಂಗಳು ಇದ್ದರೂ ಹಲವು  ಕೊರತೆಗಳು ಇರುತ್ತವೆ. ನಿಮ್ಮಲ್ಲಿ ಯಾರಿಗೂ ಕಡಿಮೆ ಇದ್ದೇವೆ ಎಂಬ ಕೊರಗು ಬೇಡ. ನೀವು ದೇವರ ಮಕ್ಕಳು. ವಿಶೇಷ ಶಕ್ತಿ ಹೊಂದಿರುವ ಮಕ್ಕಳು ನೀವು. ನಮ್ಮೆಲ್ಲರಿಗಿಂತಲೂ ಶಕ್ತಿಶಾಲಿ ಮಕ್ಕಳು ನೀವು. ಬದುಕಿ ತೋರಿಸೋ ಛಲ ನಿಮ್ಮಲ್ಲಿ ಇರಲಿ. ಮಾನವೀಯ ಧರ್ಮವನ್ನು ಪ್ರತಿಯೊಬ್ಬ ಮನುಷ್ಯನಿಗೂ ದೇವರು ಕೊಟ್ಟಿರ್ತಾನೆ. ಅದನ್ನು ಕೆಲವರು ಮರೆಯುತ್ತಾರೆ, ಕೆಲವರು ಅಳವಡಿಸಿಕೊಳ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ:
ವಸತಿ ಶಾಲೆಗಳಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6,800 ರೂ.ಗಳನ್ನು 10,200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6,000 ರೂ.ಗಳನ್ನು 9,000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧ,ಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9,300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧ,ಕಿವುಡ ಮಕ್ಕಳಿಗೆ 7,800 ರೂ.ಗಳನ್ನು, ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15,000 ರೂ.ಗಳನ್ನು, ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3,000 ರೂ. ದಿಂದ 10,000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ನುಡಿದಿದ್ದಾರೆ.

ಇಡೀ ಸಮಾಜ ಅವಲೋಕನ ಮಾಡಬೇಕು. ದೇವರ ಮಕ್ಕಳಿಗೆ ಸಹಾಯ ಮಾಡಬೇಕು. ನಿಮ್ಮ ಬದುಕಿನಲ್ಲಿ ಇದನ್ನು ಅಳವಡಿಸಿಕೊಳ್ಳಿ. ಅವರ ಬದುಕಿಗೆ ಸಹಾಯ ಮಾಡಿ. ಇಲ್ಲಿ ಯಾವುದು ಅಸಾಧ್ಯ ಇಲ್ಲ ಮಾಡುವ ಮನಸ್ಸಿರಬೇಕು ಅಷ್ಟೇ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಹಾಲಪ್ಪ ಆಚಾರ್, ಸಂಸದ ಪಿ.ಸಿ ಮೋಹನ್, ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *