ಸಹಪಾಠಿಗೆ ಶಾಲೆಯಲ್ಲೇ ಚಾಕು ಇರಿತ – ಉದಯ್‌ಪುರದಲ್ಲಿ ಹಿಂಸಾಚಾರ, 24 ಗಂಟೆ ಇಂಟರ್‌ನೆಟ್‌ ಸೇವೆ ಸ್ಥಗಿತ

Public TV
2 Min Read

ಜೈಪುರ: 10ನೇ ತರಗತಿಯ ವಿದ್ಯಾರ್ಥಿಗೆ (10 Class Student) ಸಹಪಾಠಿಯೊಬ್ಬ ಶಾಲೆಯಲ್ಲೇ ಚಾಕುವಿನಿಂದ ಇರಿದ ಶಾಕಿಂಗ್‌ ಘಟನೆ ರಾಜಸ್ಥಾನದ ಉದಯಪುರದ (Udaipur) ಮಧುಬನ್ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಬಾಲಕನನ್ನು ಪೊಲೀಸರು (Police) ಬಂಧಿಸಿದ್ದಾರೆ. ಈ ವಿಚಾರ ತಿಳಿದ ಬೆನ್ನಲ್ಲೇ ಹಿಂಸಾಚಾರ ನಡೆದಿದ್ದು ಜಿಲ್ಲಾಡಳಿತ ಈಗ 144 ಸೆಕ್ಷನ್‌ ಜಾರಿ ಮಾಡಿದೆ. ಅಷ್ಟೇ ಅಲ್ಲದೇ ಉದಯ್‌ಪುರದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ  24 ಗಂಟೆಗಳ ಕಾಲ ಇಂಟರ್‌ನೆಟ್‌ ಸೇವೆಯನ್ನು (Internet Suspended) ಸ್ಥಗಿತ ಮಾಡಿದೆ. ಇದನ್ನೂ ಓದಿ: ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥನ ಜೊತೆ ಸಿಎಂ, ಡಿಸಿಎಂ ಡಿನ್ನರ್

 

ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.  ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಕನಿಷ್ಠ ಮೂರು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಇದನ್ನೂ ಓದಿ: ರಾಜ್ಯದ 2 ಮೆಟ್ರೋ ಕಾರಿಡಾರ್‌ಗಳಿಗೆ ಕೇಂದ್ರ ಅನುಮೋದನೆ: ಪ್ರಹ್ಲಾದ್ ಜೋಶಿ

 

ವಿದ್ಯಾರ್ಥಿಗಳ ಮಧ್ಯೆ ಸಣ್ಣ ವಿಚಾರಕ್ಕೆ ನಡೆದ ಗಲಾಟೆ ನಡೆದಾಗ ಮತ್ತೊಬ್ಬ ವಿದ್ಯಾರ್ಥಿ ಚಾಕು ಇರಿದಿದ್ದಾನೆ. ಸಂತ್ರಸ್ತ ಬಾಲಕ ಈಗ ತುರ್ತು ನಿಗಾ ಘಟಕದಲ್ಲಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಸ್ಥಳೀಯ ರಾಜಕೀಯ ಮುಖಂಡರು ಆಗಮಿಸುತ್ತಿದ್ದಾರೆ

 

Share This Article