ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

1 Min Read

ಬೆಂಗಳೂರು: ಅನೈತಿಕ ಸಂಬಂಧಕ್ಕೆ (Illicit Relationship) ಅಡ್ಡಿಯಾದ ಪ್ರೇಯಸಿಯ ಪತಿಯನ್ನು (Lover’s Husband) ಪ್ರಿಯಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಸುನೀಲ್ ನಾಯಕ್ ಕೊಲೆಯಾದ ಪತಿ. ಪ್ರಿಯಕರ ಬಸುದೇವ್ ಮಲ್ಲಿಕ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ ಹೊಂದಿದ್ದ. ಈ ವಿಚಾರ ತಿಳಿದು ಸುನೀಲ್ ನಾಯಕ್ ಗಲಾಟೆ ಮಾಡಿದ್ದ. ಇದರಿಂದ ಕೋಪಗೊಂಡ ಆರೋಪಿ ಬಸುದೇವ್ ನಾಯಕ್ ಮದ್ಯಪಾನ ಮಾಡುವ ನೆಪದಲ್ಲಿ ಒಟ್ಟಿಗೆ ಸೇರಿ ಕಂಠಪೂರ್ತಿ ಕುಡಿಸಿ ಸುನೀಲ್ ನಾಯಕ್‌ನನ್ನ ಕೊಲೆ ಮಾಡಿದ್ದ. ಇದನ್ನೂ ಓದಿ: ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

ಕೊಲೆ ಬಳಿಕ ಮೃತದೇಹವನ್ನು ಮೂಟೆಯಲ್ಲಿ ಹಾಕಿ ಬೊಮ್ಮಸಂದ್ರದ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ. ಈ ಸಂಬಂಧ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಬಸುದೇವ್ ಮಲ್ಲಿಕ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Share This Article