ಉತ್ತರ ಕರ್ನಾಟಕದಲ್ಲಿ ಶಾಹಿ ಎಕ್ಸ್‌ಪೋರ್ಟ್‌ ಸಂಸ್ಥೆಯಿಂದ 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

Public TV
1 Min Read

ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪನೆ ಗುರಿ ಹೊಂದಲಾಗಿದ್ದು, ಸುಮಾರು 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಲು ಯೋಜಿಸಲಾಗಿದೆ ಎಂದು ಶಾಹಿ ಎಕ್ಸ್‌ಪೋರ್ಟ್‌ ಸಂಸ್ಥೆಯ ಪಿ.ಬಿ ಆನಂದಪದ್ಮನಾಭ ಹೇಳಿದ್ದಾರೆ.

ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ ಮೂರು ಸರ್ಕಾರಗಳಯ ಬದಲಾಗಿವೆ. ಆದರೆ ಕೈಗಾರಿಕಾ ನೀತಿಯಲ್ಲಿ ಬದಲಾವಣೆಗಳಾಗಿಲ್ಲ. ಉದ್ಯಮಿಗಳಿಗೆ ನಿರಂತರ ಪ್ರೋತ್ಸಾಹ ಸಿಗುತ್ತಿದೆ, 2 ವರ್ಷಗಳಲ್ಲಿ 200 ಕೋಟಿ ರೂ. ಬಂಡವಾಳ ಹೂಡಲಾಗಿದೆ ಎಂದು ತಿಳಿಸಿದರು.

ಕಳೆದ 8 ವರ್ಷಗಳಲ್ಲಿ 23 ಉದ್ದಿಮೆಗಳು ಬೆಂಗಳೂರು ಕೇಂದ್ರಿತವಾಗಿ ಕಾರ್ಯನಿರ್ವಹಿಸುತ್ತಿದ್ದವು. ಈಗ ಬೆಂಗಳೂರಿನಿಂದ ಹೊರಗಡೆ 24 ಉದ್ಯಮಗಳಿವೆ. ಉತ್ತರ ಕರ್ನಾಟಕದ ಗದಗ, ಧಾರವಾಡ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಬರುವ ವರ್ಷಗಳಲ್ಲಿ 5 ಉದ್ಯಮಗಳನ್ನು ಸ್ಥಾಪಿಸಿ, 12,500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲಾಗುವುದು ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ ಹುಬ್ಬಳ್ಳಿ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯುತ್ತಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರಾಸ್ತಾವಿಕವಾಗಿ ಮಾತನಾಡಿ, ಹದಿನೈದು ವರ್ಷಗಳ ಹಿಂದೆ ಧಾರವಾಡದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ತಮಗೆ ಉತ್ತರ ಕರ್ನಾಟಕದ ಭೂಗೋಳಿಕ, ಸಾಮಾಜಿಕ, ಆರ್ಥಿಕ ಪರಿಚಯವಿದೆ. ಈ ಭಾಗದ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿದೆ. ಇನ್ವೆಸ್ಟ್ ಕರ್ನಾಟಕ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವುದು ಹೊಸ ಭರವಸೆ ಹುಟ್ಟಿಸಿದೆ ಎಂದರು.

ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಅವರು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಪರಿಚಯ ಮಾಡಿಕೊಟ್ಟರು.

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಬಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೇರಿದಂತೆ ಪ್ರಮುಖ ಉದ್ದಿಮೆದಾರರು, ಕಂಪನಿಗಳ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *