ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಹಸ್ತಕ್ಷೇಪ: ಮಾಜಿ ಸೇನಾ ಮುಖ್ಯಸ್ಥ

Public TV
1 Min Read

ನವದೆಹಲಿ: ಮಣಿಪುರ (Manipur) ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಒಳಗೊಳ್ಳುವಿಕೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ವಿವಿಧ ದಂಗೆಕೋರ ಗುಂಪುಗಳಿಗೆ ಚೀನಾ (China) ನೆರವು ನೀಡಿರುವ ಸಾಧ್ಯತೆ ಇದೆ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ (Former Army Chief General) ಎಂಎಂ ನರವಾಣೆ ಹೇಳಿದ್ದಾರೆ.

ಇಂಟರ್‍ನ್ಯಾಶನಲ್ ಸೆಂಟರ್‌ನಲ್ಲಿ `ರಾಷ್ಟ್ರೀಯ ಭದ್ರತಾ ದೃಷ್ಟಿಕೋನ’ ವಿಷಯದ ಕುರಿತು ಸಂವಾದ ನಡೆಸಿದರು. ಈ ವೇಳೆ ಅವರು ಜನಾಂಗೀಯ ಸಂಘರ್ಷದ ಬಗ್ಗೆ ಮಾತನಾಡಿದ್ದಾರೆ. ಗಡಿ ರಾಜ್ಯಗಳಲ್ಲಿನ ಅಸ್ಥಿರತೆಯು ದೇಶದ ಒಟ್ಟಾರೆ ರಾಷ್ಟ್ರೀಯ ಭದ್ರತೆಗೆ ತೊಡಕಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

ಸರ್ಕಾರ ಮತ್ತು ಸಂಬಂಧಿಸಿದ ಎಲ್ಲಾ ವ್ಯಕ್ತಿಗಳು ಅಗತ್ಯವಾದ ಕೆಲಸ ಮಾಡುತ್ತಿದ್ದಾರೆ ಎಂದು ನನಗೆ ಖಾತ್ರಿ ಇದೆ. ವಿದೇಶಿ ಹಸ್ತಕ್ಷೇಪದ ಬಗ್ಗೆ ನಾನು ಮಾತನಾಡುವುದಿಲ್ಲ, ಹಾಗೆಂದು ಅದನ್ನು ನಿರಾಕರಿಸುತ್ತಿಲ್ಲ. ದಂಗೆಕೋರರ ಗುಂಪುಗಳಿಗೆ ಖಂಡಿತವಾಗಿ ಚೀನಾ ನೆರವು ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಚೀನಾದ ನೆರವು ಈ ಗುಂಪುಗಳಿಗೆ ಹಲವು ವರ್ಷಗಳಿಂದ ಸಹಾಯ ಮಾಡುತ್ತಿದೆ. ಈಗಲೂ ಅದನ್ನು ಮುಂದುವರಿಸುತ್ತಿದೆ. ಮಣಿಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ ಬಹಳ ಹಿಂದಿನಿಂದಲೂ ಇದೆ. ಇತ್ತಿಚೀನ ವರ್ಷಗಳಲ್ಲಿ ಅದು ಹೆಚ್ಚಾಗಿದೆ. ಎಲ್ಲಾ ಪ್ರಯತ್ನಗಳ ನಡುವೆ ನಾವು ಈ ಹಿಂಸಾಚಾರದ ನಿರಂತರತೆಯನ್ನು ನೋಡುತ್ತಿರುವುದಕ್ಕೆ ಇದು ಒಂದು ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್