IPL ಉದ್ಘಾಟನಾ ಕಾರ್ಯಕ್ರಮದಲ್ಲಿ ಸೊಂಟ ಬಳುಕಿಸಿದ ರಶ್ಮಿಕಾ ಮಂದಣ್ಣ-ತಮನ್ನಾ

By
1 Min Read

ಮಾ.31ರಿಂದ ಪ್ರತಿಷ್ಠಿತ 16ನೇ ಐಪಿಎಲ್ (Ipl 2023) ಆವೃತ್ತಿಗೆ ಚಾಲನೆ ಸಿಕ್ಕಿದೆ. ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರಾದ `ಪುಷ್ಪ’ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna), ತಮನ್ನಾ ಭಾಟಿಯಾ (Tamanna Bhatia) ಸೊಂಟ ಬಳುಕಿಸಿದ್ದಾರೆ. ಅಭಿಮಾನಿಗಳನ್ನ ರಂಜಿಸಿದ್ದಾರೆ.

ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಿದೆ. ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ- ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೊಂಟ ಬಳುಕಿಸಿದ್ದಾರೆ.

ಸಾಮಿ ಸಾಮಿ, ಶ್ರೀವಲ್ಲಿ, ನಾಟು ನಾಟು ಹಾಡಿಗೆ ರಶ್ಮಿಕಾ ಮಂದಣ್ಣ ಐಪಿಎಲ್ ವೇದಿಕೆಯಲ್ಲಿ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ತಮಿಳಿನ ಟಮ್ ಟಮ್ ಹಾಡಿಗೆ ತಮನ್ನಾ ಕುಣಿದು ಕುಪ್ಪಳಿಸಿದ್ದಾರೆ. ಬಾಲಿವುಡ್‌ ಗಾಯಕ ಕೂಡ ಅರ್ಜಿತ್‌ ಸಿಂಗ್‌ ಕೂಡ ಸೂಪರ್‌ ಹಿಟ್‌ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Share This Article