IPL 2025: ಮಾರ್ಚ್‌ 23 ರಿಂದ ಐಪಿಎಲ್‌ ಆರಂಭ: ಬಿಸಿಸಿಐ ಉಪಾಧ್ಯಕ್ಷ ಘೋಷಣೆ

Public TV
1 Min Read

ಮುಂಬೈ: 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಇದೇ ಮಾರ್ಚ್‌ 23 ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ  (BCCI) ಉಪಾಧ್ಯಕ್ಷ ರಾಜೀವ್‌ ಶುಕ್ಲಾ ತಿಳಿಸಿದ್ದಾರೆ.

ಮುಂಬೈನಲ್ಲಿ ನಡೆದ ವಿಶೇಷ ಸಭೆಯಲ್ಲಿ (ಎಸ್‌ಜಿಎಂ) ಭಾಗವಹಿಸಿದ್ದ ಶುಕ್ಲಾ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ. ಈ ವೇಳೆ, ಕಳೆದ ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ನಡೆದ ಮೆಗಾ ಹರಾಜಿನಲ್ಲಿ ಎಲ್ಲಾ 10 ಫ್ರಾಂಚೈಸಿಗಳು ಈಗಾಗಲೇ ತಮ್ಮ ತಂಡವನ್ನು ಆಯ್ಕೆ ಮಾಡಿವೆ. ಹರಾಜು ಮುಗಿದ ನಂತರ ಲೀಗ್ ಯಾವಾಗ ಆರಂಭವಾಗುತ್ತದೆ ಎಂಬ ಬಗ್ಗೆ ಊಹಾಪೋಹಗಳಿದ್ದವು. ಈಗ ಮಾರ್ಚ್ 23 ರಿಂದ ಐಪಿಎಲ್ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಋತುವಿನ ಐಪಿಎಲ್‌ ಮಾರ್ಚ್ 22 ರಿಂದ ಆರಂಭವಾಗಿತ್ತು. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೇ 26 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಅಂತಿಮ ಪಂದ್ಯ ನಡೆದಿತ್ತು.

Share This Article