ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

Public TV
2 Min Read

– ಶ್ರೇಯಸ್‌ ಅಯ್ಯರ್‌ ಸ್ಫೋಟಕ ಅರ್ಧಶತಕ
– 2ನೇ ಬಾರಿ ಫೈನಲ್‌ ಪ್ರವೇಶಿಸಿದ ಪಂಜಾಬ್‌

ಅಹಮಾದಾಬಾದ್‌: ಕ್ವಾಲಿಫೈಯರ್‌-2ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ರೋಚಕ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಪಂಜಾಬ್‌ (Punjab Kings) ಐಪಿಎಲ್‌ ಫೈನಲ್‌ಗೆ (IPL Final) ಪ್ರವೇಶಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಬಗ್ಗು ಬಡಿದ ಪಂಜಾಬ್‌ 2ನೇ ಬಾರಿ ಫೈನಲ್‌ಗೆ ತಲುಪಿದ್ದು ನಾಳೆ ಆರ್‌ಸಿಬಿಯನ್ನು (RCB) ಎದುರಿಸಲಿದೆ

ಮಳೆಯಿಂದ 2 ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನೂ 6 ಎಸೆತ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ಜಯ ಸಾಧಿಸಿತು.

ಪ್ರಿಯಾಂಶ್‌ ಆರ್ಯ 20 ರನ್‌, ಪ್ರಭುಸಿಮ್ರಾನ್‌ ಸಿಂಗ್‌ 6 ರನ್‌, ಬುಮ್ರಾ ಮೊದಲ ಓವರ್‌ನಲ್ಲಿ 20 ರನ್‌ ಹೊಡೆದ ಜೋಶ್‌ ಇಂಗ್ಲಿಸ್‌ 38 ರನ್‌(21 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದಾಗ ಪಂಜಾಬ್‌ ಸ್ಕೋರ್‌ 3 ವಿಕಟ್‌ ನಷ್ಟಕ್ಕೆ 72 ರನ್‌ ಗಳಿಸಿತ್ತು. ಇದನ್ನೂ ಓದಿ: ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

ಒಂದು ಹಂತದಲ್ಲಿ ಸಂಕಷ್ಟದಲ್ಲಿದ್ದರೂ ಶ್ರೇಯಸ್‌ ಅಯ್ಯರ್‌ ಮತ್ತು ನೆಹಲ್‌ ವಧೇರಾ 47 ಎಸೆತಗಳಲ್ಲಿ 84 ರನ್‌ ಜೊತೆಯಾಟವಾಡಿ ತಂಡವನ್ನು ಪಾರು ಮಾಡಿದರು. ವಧೇರಾ 48 ರನ್‌(29 ಎಸೆತ, 4 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ನಾಯಕನ ಆಟವಾಡಿದ ಶ್ರೇಯಸ್‌ ಅಯ್ಯರ್‌ ಔಟಾಗದೇ 87 ರನ್‌(41 ಎಸೆತ, 5 ಬೌಂಡರಿ, 8 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು. ಅತ್ಯುತ್ತಮ ಆಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟ ಶ್ರೇಯಸ್‌ ಅಯ್ಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

 

11 ವರ್ಷಗಳ ಬಳಿಕ ಫೈನಲ್‌:
ಪಂಜಾಬ್ ಐಪಿಎಲ್‌ನಲ್ಲಿಎರಡನೇ ಬಾರಿ ಫೈನಲ್‌ ಪ್ರವೇಶಿಸಿದೆ. 11 ವರ್ಷಗಳ ಹಿಂದೆ 2014 ರಲ್ಲಿ ಕೋಲ್ಕತ್ತಾ ವಿರುದ್ಧ ಫೈನಲ್‌ನಲ್ಲಿ ಸೋತು ಪಂಜಾಬ್‌ ರನ್ನರ್‌ ಅಪ್‌ ಅಗಿತ್ತು.

Share This Article