ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
1 Min Read

ಚಂಡೀಗಢ: ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ (RCB) ತಂಡ ಫೈನಲ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ‘ಹಾಕ್ರೊ ಸ್ಟೆಪ್ಪು’ ಎಂದು ಅಭಿಮಾನಿಗಳನ್ನು ಹುರಿದುಂಬಿಸಿದೆ.

ಮಲ್ಲನ್‌ಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಕೇವಲ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಈ ಬೆನ್ನಲ್ಲೇ ಆರ್‌ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್ ಖಾತೆಯಲ್ಲಿ ‘ಹಾಕ್ರೊ ಸ್ಟೆಪ್ಪು’ ಎಂದು ಬರೆದು ಬೆಂಕಿಯ ಇಮೋಜಿ ಹಾಕಿ ಹರ್ಷ ವ್ಯಕ್ತಪಡಿಸಿದೆ. ಈ ಪೋಸ್ಟ್‌ಗೆ ಆರ್‌ಸಿಬಿ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿ ಲೈಕ್ಸ್, ಕಾಮೆಂಟ್ಸ್ ಮಾಡುತ್ತಿದ್ದಾರೆ.

2018ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್, 2021ರಲ್ಲಿ ಸಿಎಸ್‌ಕೆ, 2022ರಲ್ಲಿ ಗುಜರಾತ್ ಟೈಟಾನ್ಸ್, 2023ರಲ್ಲಿ ಸಿಎಸ್‌ಕೆ, 2024ರಲ್ಲಿ ಕೆಕೆಆರ್ ತಂಡಗಳು ಕ್ವಾಲಿಫೈಯರ್-1ನಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿವೆ. ಇದೀಗ 18ನೇ ಆವೃತ್ತಿಯ ಕ್ವಾಲಿಫೈಯರ್-1 ನಲ್ಲಿ ಗೆದ್ದು ಫೈನಲ್ ಪ್ರವೇಶಿಸಿರುವ ಆರ್‌ಸಿಬಿ ಚಾಂಪಿಯನ್ ಪಟ್ಟಕ್ಕೆ ಕೊರಳೊಡ್ಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Share This Article