ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು 16,779 ಕೋಟಿ ರೂ.) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ.
ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನ ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ. ಆರ್‌ಸಿಬಿ ಫ್ರಾಂಚೈಸಿಯಿಂದ ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
This Is A Developing Story More Details Awaited

