ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

1 Min Read

ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ. ಇದನ್ನೂ ಓದಿ: ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.

Share This Article