ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

1 Min Read

ದುಬೈ: ಇರಾನ್ ಡ್ರೋನ್ ದಾಳಿಗೆ (Iranian Drone Strike) ದುಬೈ ವಿಮಾನ ನಿಲ್ದಾಣದ (Dubai Airport) ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

- Advertisement -

ಸೋಮವಾರ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಇದನ್ನೂ ಓದಿ: ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE ಆದೇಶ

- Advertisement -

ಬೆಂಕಿಯನ್ನು ನಂದಿಸಲು ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲಾಗಿದೆ. ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

- Advertisement -

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪದಲ್ಲಿ ಡ್ರೋನ್ ದಾಳಿಯಿಂದ ಇಂಧನ ಟ್ಯಾಂಕ್‌ಗಳಲ್ಲಿ ಒಂದರ ಮೇಲೆ ಪರಿಣಾಮ ಬೀರಿತು ಎಂದು ದುಬೈ ಮಾಧ್ಯಮ ಕಚೇರಿ X ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: 7,656 ಕೋಟಿ ರೂ. ತುರ್ತು ಮಿಲಿಟರಿ ಬಜೆಟ್‌ಗೆ ಇಸ್ರೇಲ್ ಅನುಮೋದನೆ

ದುಬೈ ನಾಗರಿಕ ರಕ್ಷಣಾ ತಂಡಗಳು ತಕ್ಷಣ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕಚೇರಿ ದೃಢಪಡಿಸಿದೆ.

Share This Article