17ರ ಹರೆಯದ ಪತ್ನಿಯ ರುಂಡ ಕತ್ತರಿಸಿ ಬೀದಿಯಲ್ಲಿ ಪ್ರದರ್ಶಿಸಿದ ಪಾಪಿ ಪತಿ..!

Public TV
1 Min Read

ಟೆಹರಾನ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆಯನ್ನು ಕತ್ತರಿಸಿ ಬಳಿಕ ಆ ತಲೆಯನ್ನು ಬೀದಿಯಲ್ಲಿ ಪ್ರದರ್ಶಿಸಿ ಬೆಚ್ಚಿಬೀಳಿಸುವಂತೆ ಮಾಡಿದ ಘಟನೆ ಇರಾನ್ ನಲ್ಲಿ ನಡೆದಿದೆ.

ಇರಾನ್‍ನ ನೈರುತ್ಯ ಭಾಗದ ನಗರ ಅಹ್ವಾಜ್ ಎಂಬಲ್ಲಿ ಈ ಘಟನೆ ನಡೆದಿದೆ. ಮೃತಳನ್ನು ಮೋನಾ ಹೈದರಿ (17) ಎಂದು ಗುರುತಿಸಲಾಗಿದೆ. ಪತಿಯೇ ಮೋನಾಳನ್ನು ಬರ್ಬರವಾಗಿ ಹತ್ಯೆ ಮಾಡಿ ವಿಕೃತಿ ಮೆರೆದಿದ್ದಾನೆ. ಈತನಿಗೆ ಸೋದರ ಮಾವನೂ ಸಾಥ್ ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ಮಾಡಿದ್ದು ಯಾಕೆ..?
ತನಗೆ ದ್ರೋಹ ಎಸಗಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶೀಲ ಶಂಕಿಸಿದ ವ್ಯಕ್ತಿ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಅಲ್ಲದೆ ಆಕೆಯ ಶಿರವನ್ನು ಕತ್ತರಿಸಿ ಬೀದಿಯಲ್ಲಿ ಹಿಡಿದು ಪ್ರದರ್ಶಿಸಿದ್ದಾನೆ. ಈ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭವಾಯಿತು. ಇದನ್ನೂ ಓದಿ: ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಇರಾನ್‍ನಲ್ಲಿ ತೀವ್ರ ಸಂಚಲನವೇ ಸೃಷ್ಟಿಯಾಗಿದೆ. ಮಹಿಳಾ ವ್ಯವಹಾರಗಳ ಉಪಾಧ್ಯಕ್ಷೆ ಎನ್ಸೀಹ್ ಖಜಾಲಿ ಅವರು ಸಂಸತ್ತಿನಲ್ಲಿ ಪ್ರಕರಣ ಸಂಬಂಧ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮತ್ತು ಇಂತಹ ಪ್ರಕರಣಗಳನ್ನು ತಡೆಯಲು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಚರಂಡಿ ವಿವಾದ ಬಗೆಹರಿಸಲು ಹೋದ ಪೊಲೀಸರಿಗೆ ದೊಣ್ಣೆಯಿಂದ ಥಳಿಸಿದ ಗ್ರಾಮಸ್ಥರು!

ಹೆಸರಾಂತ ಸ್ತ್ರೀವಾದಿ ಚಲನಚಿತ್ರ ನಿರ್ಮಾಪಕಿ ತಹ್ಮಿನೆ ಮಿಲಾನಿ ತಮ್ಮ ಇನ್‍ಸ್ಟಾ ಖಾತೆಯಲ್ಲಿ ಮೋನಾ ಅಜ್ಞಾನಕ್ಕೆ ಬಲಿಯಾಗಿದ್ದಾರೆ. ಈ ಅಪರಾಧಕ್ಕೆ ನಾವೆಲ್ಲರೂ ಜವಾಬ್ದಾರರು ಎಂದು ಬರೆದುಕೊಂಡಿದ್ದಾರೆ. ಇರಾನ್‍ನಲ್ಲಿ ಮಹಿಳೆಯರ ವಿರುದ್ಧ ದೌರ್ಜನ್ಯಗಳನ್ನು ತಡೆಯಲು ಮದುವೆಗೆ ಕಾನೂನಿನ ವಯಸ್ಸನ್ನು 13ಕ್ಕೆ ನಿಗದಿ ಮಾಡಲಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ ಮೋನಿ ಹೈದರಿ 12 ವರ್ಷವಿದ್ದಾಗಲೇ ವಿವಾಹವಾಗಿದ್ದು, ಮೂರು ವರ್ಷದ ಮಗ ಆಕೆಗಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *