ಜೇಟ್ಲಿ ಬಜೆಟ್ ವಿರುದ್ಧ ಮುನಿಸು: ಎನ್‍ಡಿಎ ಮೈತ್ರಿಕೂಟಕ್ಕೆ ಟಿಡಿಪಿ ಗುಡ್‍ಬೈ?

Public TV
1 Min Read

ಹೈದರಾಬಾದ್: ದಕ್ಷಿಣ ಭಾರತದಲ್ಲಿ ಬಿಜೆಪಿಯ ಅತ್ಯಂತ ದೊಡ್ಡ ಮಿತ್ರಪಕ್ಷವಾಗಿರುವ ತೆಲುಗು ದೇಶಂ ಪಾರ್ಟಿ (ಟಿಡಿಪಿ) ಎನ್‍ಡಿ ಮೈತ್ರಿಕೂಟದಿಂದ ಹೊರ ಬರಲು ಚಿಂತನೆ ನಡೆಸಿದ್ದು ಭಾನುವಾರ ನಿರ್ಧಾರ ಪ್ರಕಟವಾಗಲಿದೆ.

ಹಣಕಾಸು ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡ, ಬಜೆಟ್ ನಲ್ಲಿ ನಮಗೆ ಏನು ಸಿಕ್ಕಿಲ್ಲ, ನಮ್ಮ ರಾಜ್ಯವನ್ನು ನಿರ್ಲಕ್ಷ್ಯಿಸಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಭಾನುವಾರ ಪಕ್ಷದ ಮುಖಂಡರ ಜೊತೆ ಮಹತ್ವದ ಸಭೆ ನಡೆಸಲಿದ್ದು ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಎನ್‍ಡಿಎಗೆ ಬೆಂಬಲ ನೀಡಬೇಕೇ ಬೇಡವೇ ಎನ್ನುವುದರ ಬಗ್ಗೆ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.

ಈ ಹಿಂದೆ ಬಿಜೆಪಿ ನಾಯಕರು ಪೋಲಾವರಂ ಯೋಜನೆ ಮತ್ತು ಹೊಸ ರಾಜಧಾನಿ ಅಮರಾವತಿ ನಿರ್ಮಾಣ ಪೂರ್ಣಗೊಳ್ಳುವವರೆಗೆ ಆಂಧ್ರ ಪ್ರದೇಶಕ್ಕೆ ಕೇಂದ್ರದ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದ್ದರು. ವಿಶಾಖಪಟ್ಟಣವನ್ನು ಕೇಂದ್ರವಾಗಿಸಿ ಹೊಸ ರೈಲ್ವೆ ವಲಯ ಸ್ಥಾಪನೆಯಂತಹ ಭರವಸೆಗಳನ್ನು ನೀಡಿದ್ದರೂ ಇದು ಅನುಷ್ಠಾನಕ್ಕೆ ಬಾರದ ಹಿನ್ನೆಲೆಯಲ್ಲಿ ಚಂದ್ರ ಬಾಬು ನಾಯ್ಡು ಅಸಮಾಧಾನಗೊಂಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರು ಟಿಡಿಪಿಯನ್ನು ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಚಂದ್ರ ಬಾಬು ನಾಯ್ಡು ಮೊದಲೇ ಮುನಿಸಿಕೊಂಡಿದ್ದರು. ಆದರೆ ಈಗ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡದ ಹಿನ್ನೆಲೆಯಲ್ಲಿ ಈ ಅಸಮಾಧಾನ ಮತ್ತಷ್ಟು ಹೆಚ್ಚಾಗಿದೆ.

ಕೆಲ ದಿನಗಳ ಹಿಂದೆ ಚಂದ್ರಬಾಬು ನಾಯ್ಡ, ಬಿಜೆಪಿಯವರು ಪದೇ ಪದೇ ಟೀಕೆ ಮಾಡುತ್ತಿದ್ದರೂ ನಾನು ನಮ್ಮ ಮುಖಂಡರಿಗೆ ತಿರುಗೇಟು ನೀಡದಂತೆ ತಡೆಯುತ್ತಿದ್ದೇನೆ. ಟಿಡಿಪಿ ಈಗಲೂ ಮಿತ್ರ ಧರ್ಮವನ್ನು ಪಾಲಿಸುತ್ತಿದ್ದರೂ ಸ್ಥಳೀಯ ಬಿಜೆಪಿ ನಾಯಕರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಕೇಂದ್ರದ ಬಿಜೆಪಿ ನಾಐಕರು ಸ್ಥಳೀಯ ನಾಯಕರ ಆರೋಪಗಳ ಬಗ್ಗೆ ಗಮನ ನೀಡುತ್ತಾರೆ ಎನ್ನುವ ಭರವಸೆಯನ್ನು ನಾನು ಹೊಂದಿದ್ದೇನೆ. ಒಂದು ವೇಳೆ ಬಿಜೆಪಿ ಮೈತ್ರಿ ಮುಂದುವರಿಸಲು ಬಯಸದಿದ್ದರೆ ಟಿಡಿಪಿ ತನ್ನದೇ ದಾರಿಯಲ್ಲಿ ಸಾಗಲಿದೆ ಎಂದು ಪ್ರತಿಕ್ರಿಯಿಸಿದ್ದರು.  ಇದನ್ನೂ ಓದಿ: ಎನ್‍ಡಿಎ ಒಕ್ಕೂಟದಿಂದ ಹೊರಬಂದ ಶಿವಸೇನೆ

Share This Article
Leave a Comment

Leave a Reply

Your email address will not be published. Required fields are marked *