ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

Public TV
2 Min Read

ಬೆಂಗಳೂರು: ಸದ್ಯ ರಾಜ್ಯದಲ್ಲಿ ಬೆಂಗಳೂರು ಕಾಲ್ತುಳಿತ ಪ್ರಕರಣ (Chinnaswamy Stampede Case) ಕೋಲಾಹಲ ಎಬ್ಬಿಸಿದ್ದು, ವಿಪಕ್ಷಗಳು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಈ ಹೊತ್ತಿನಲ್ಲೇ ಕಾಂಗ್ರೆಸ್‌ ಹೈಕಮಾಂಡ್ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ (ಇಂದು) ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್ ಗಾಂಧಿ (Rahul Gandhi) ಹಾಗೂ ಐಸಿಸಿ ನಾಯಕರು ಚರ್ಚೆ ನಡೆಸಲು ಮುಂದಾಗಿದ್ದಾರೆ.

ಹೌದು. ಹೈಕಮಾಂಡ್‌ ಬುಲಾವ್‌ ಮೇರೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಈಗಾಗಲೇ ದೆಹಲಿಯ ಕಾಂಗ್ರೆಸ್‌ ಕಚೇರಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ವರಿಷ್ಠರು ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಲಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಕೇಸ್ – ಹೈಕಮಾಂಡ್ ಬುಲಾವ್, ದೆಹಲಿಗೆ ತೆರಳಿದ ಸಿಎಂ, ಡಿಸಿಎಂ

ಇಂದು ಬೆಳಗ್ಗೆ ದೆಹಲಿಯ ಕರ್ನಾಟಕ ಭವನಕ್ಕೆ ತೆರಳಿದ್ದ ಸಿಎಂ, ಡಿಸಿಎಂ ರಾಹುಲ್ ಗಾಂಧಿ ಭೇಟಿಗೂ ಮುನ್ನ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಇದಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಾಸಕ ಅಶೋಕ್ ಪಟ್ಟಣ್ ಕೂಡ ಸಾಥ್ ನೀಡಿದ್ದಾರೆ. ಬಳಿಕ ಒಂದೇ ಕಾರಿನಲ್ಲಿ ಸಿಎಂ, ಡಿಸಿಎಂ ರಾಹುಲ್‌ ಗಾಂಧಿ ಭೇಟಿಗಾಗಿ ಕಾಂಗ್ರೆಸ್‌ ಕಚೇರಿಗೆ ತರಳಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಸಂಭವಿಸಿದಾಗ ನಮ್ಮನ್ನ ರಕ್ಷಿಸಿಕೊಳ್ಳೋದು ಹೇಗೆ? – ಈ ಸಣ್ಣ ತಂತ್ರವೂ ಅಮೂಲ್ಯವಾದ ಜೀವ ಉಳಿಸುತ್ತೆ

6-10 ಸಚಿವರಿಗೆ ಕೊಕ್?
ಸಭೆಯಲ್ಲಿ ಮುಖ್ಯಮಂತ್ರಿ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚೆ ನಡೆಯಲಿದ್ದು, ಸುಮಾರು 6 ರಿಂದ 10 ಸಚಿವರಿಗೆ ಕೊಕ್‌ ನೀಡುವ ಸಾಧ್ಯತೆಗಳಿವೆ. ಜೊತೆಗೆ ಪ್ರಮುಖ ಸಚಿವರ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

ಅಲ್ಲದೇ ರಾಜ್ಯದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿರುವ ಬೆಂಗಳೂರು ಕಾಲ್ತುಳಿತ ಪ್ರಕರಣ, ಜಾತಿ ಜನಗಣತಿ ವರದಿ ಅನುಷ್ಠಾನ, ವಿಧಾನ ಪರಿಷತ್‌ ಸದಸ್ಯರ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

ಸತೀಶ್‌ ಜಾರಕಿಹೊಳಿ ಹೇಳಿದ್ದೇನು?
ಇನ್ನೂ ಸಿಎಂ, ಡಿಸಿಎಂ ಹೈಕಮಾಂಡ್ ‌ಭೇಟಿ ಕುರಿತು ದೆಹಲಿಯಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆ ಬಗ್ಗೆ ವರದಿ ನೀಡಲು ಹೈಕಮಾಂಡ್ ಭೇಟಿಗೆ ಸಿಎಂ ಡಿಸಿಎಂ ಬಂದಿದ್ದಾರೆ. ಸಹಜವಾಗಿ ವರದಿ ಕೇಳಿದೆ, ದೊಡ್ಡ ಪ್ರಮಾಣದಲ್ಲಿ ಆಗಿರೋದ್ರಿಂದ ಹೈಕಮಾಂಡ್ ವರದಿ ಕೇಳಿದೆ. ನಾನು ಹೈಕಮಾಂಡ್‌ ಭೇಟಿಗೆ ಹೋಗಿಲ್ಲ ಸಿಎಂ ಡಿಸಿಎಂ ಹೋಗಿದ್ದಾರೆ. ಕಾಲ್ತುಳಿತದಲ್ಲಿ ಸರ್ಕಾರದ ಲೋಪ ಇದೆಯಾ ಇಲ್ವಾ? ಅಥವಾ ಇದಕ್ಕೆ ಯಾರು ಹೊಣೆ? ಅನ್ನೋದರ ಬಗ್ಗೆ ತನಿಖೆ ನಡೆಯುತ್ತಿದೆ. ನ್ಯಾ. ಕುನ್ಹಾ ಅವರು ತನಿಖೆ ಮಾಡ್ತಿದ್ದಾರೆ ವರದಿ ಬಂದ ಬಳಿಕ ಏನು ಅಂತಾ ತಿಳಿಯಲಿದೆ ಎಂದು ತಿಳಿಸಿದ್ದಾರೆ.

Share This Article