ಗೃಹ ಸಚಿವ ಪರಂ ಕೇಸ್‌ಗೆ ರನ್ಯಾರಾವ್ ಲಿಂಕ್?

By
1 Min Read

ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ (G. Parameshwara) ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ದಾಳಿ ಹಿಂದೆ ರನ್ಯಾ ರಾವ್‌ ಕೇಸ್‌ (Ranya Rao Case) ಲಿಂಕ್‌ ಇದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ (R Ashok) ಮಾಡಿದ ಗಂಭೀರ ಆರೋಪದಿಂದ ಈ ಪ್ರಶ್ನೆ ಈಗ ಎದ್ದಿದೆ.  ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದು ನಿಂತ ಟಿಟಿ!

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್‌, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂಬ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮ್ಯಾನೇಜರ್ ದಿಢೀರ್ ವರ್ಗಾವಣೆ

ತನಿಖೆ ನಡೆದ ಬಳಿಕ ಮತ್ತಷ್ಟು ವಿಷಯಗಳು ಹೊರಬರಬಹುದು. ಈ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆ. ಆದರೆ ದಾಳಿಯಿಂದ ಇವರು ಹೆದರುತ್ತಾರೆ ಎಂದು ಅನಿಸುವುದಿಲ್ಲ. ಯಾಕೆಂದರೆ ಇವರು ಲೂಟಿ ಮಾಡಲೆಂದೇ ಬಂದಿದ್ದಾರೆ ಎಂದರು.

 

ಮೊದಲು ಇಡಿ ದಾಳಿ ಮುಗಿದು ತನಿಖೆ ನಡೆಯಲಿದೆ. ತನಿಖೆ ಪೂರ್ತಿ ಆದ ಮೇಲೆ ನಾವು ಪರಮೇಶ್ವರ್ ವಿರುದ್ಧ ಕ್ರಮಕ್ಕೆ ಆಗ್ರಹಿಸ್ತೇವೆ. ಮುಂದಿನ ಹೋರಾಟ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಚಿನ್ನ ಕಳ್ಳ ಸಾಗಾಣಿಕೆ ಮಾಡಿ ಸಿಕ್ಕಿಬಿದ್ದಿರುವ ರನ್ಯಾ ನಿವಾಸ ಮೇಲೆ ಇಡಿ ದಾಳಿ ನಡೆಸಿತ್ತು. ಇಡಿ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದವು. ಈ ದಾಖಲೆಗಳ ಆಧಾರದ ಮೇಲೆ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆದಿದೆ ಎನ್ನಲಾಗುತ್ತಿದೆ.

Share This Article